ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜಿಲ್ಲಾ ಉತ್ತಮ ಸಹಕಾರಿ ಪ್ರಶಸ್ತಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ವೇಣೂರು: ಕಳೆದ  ಐದು ವರ್ಷಗಳ ಅವಧಿಯಲ್ಲಿ ಸತತ ಮೂರನೇ ಬಾರಿಗೆ  ಉತ್ತಮ ಸಹಕಾರಿ ಸಂಘ ಪ್ರಶಸ್ತಿಗೆ ಪಾತ್ರವಾದ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನ.27 ರಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉತ್ಕೃಷ್ಟ ಸಹಕಾರಿ ಸೌಧದಲ್ಲಿ ಜರುಗಿದ 106ನೇ ವಾರ್ಷಿಕ ಮಹಾಸಭೆಯಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ. ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು.

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ  ಸುಂದರ ಹೆಗ್ಡೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ ಪೂಜಾರಿ ಇವರಿಗೆ  ಪ್ರಶಸ್ತಿ ಪ್ರದಾನ ಮಾಡಲಾಯಿತು.

 ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ನಿರಂಜನ ಬಾವಂತಬೆಟ್ಟು ಸೇರಿದಂತೆ, ಇತರ ನಿರ್ದೇಶಕರು, ಗಣ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.