ಶ್ರೀ ಗುರುದೇವ‌ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ:  ಶ್ರೀ ಗುರುದೇವ‌ ವಿವಿಧೋದ್ದೇಶ ಸಹಕಾರ ಸಂಘ ನಿ. ಬೆಳ್ತಂಗಡಿ ಇದರ ಸಹಕಾರ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಡಲ್ಪಡುವ ಸಾಧನ‌ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರ ಪರವಾಗಿ ಸಂಘದ ವಿಶೇಷಾಧಿಕಾರಿ ಯಂ ಮೋನಪ್ಪ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಅಶ್ವತ್ಥ್ ಕುಮಾರ್  ಇವರಿಗೆ ನೀಡಿ ಗೌರವಿಸಲಾಯಿತು.

ನ.27 ರಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉತ್ಕೃಷ್ಟ ಸಹಕಾರಿ ಸೌಧದಲ್ಲಿ ಜರುಗಿದ 106ನೇ ವಾರ್ಷಿಕ ಮಹಾಸಭೆಯಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ. ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ನಿರಂಜನ ಬಾವಂತಬೆಟ್ಟು ಸೇರಿದಂತೆ, ಇತರ ನಿರ್ದೇಶಕರು, ಗಣ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.