ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸಾಧಕರಿಗೆ ಗೌರವಾರ್ಪಣೆ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ ರಾಷ್ಟ್ರ, ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪುರಸ್ಕೃತರಾದ  ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ

 

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಇದರ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ ರಾಷ್ಟ್ರ, ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ  ಪ್ರಶಸ್ತಿ ಪುರಸ್ಕೃತರಾದ ಸಾಧಕರಿಗೆ ಮತ್ತು ಸಂಸ್ಥೆಗಳಿಗೆ ಗೌರವಾರ್ಪಣೆ ಕಾರ್ಯಕ್ರಮವು ನ.28 ರಂದು ಬೆಳ್ತಂಗಡಿಯ ಸಾಂತೋಮ್ ಟವರ್ ಸಭಾಂಗಣದಲ್ಲಿ ಜರುಗಿತು.
ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಅಶ್ರಫ್ ಆಲಿಕುಂಞಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಜಿರೆ ಎಸ್ ಡಿ ಎಂ ಪದವಿ ಕಾಲೇಜು ಪ್ರಾಂಶುಪಾಲ ಡಾ. ಸತೀಶ್ಚಂದ್ರ ಎಸ್, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಭ್ಯಾಗತರಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ರಾಷ್ಟ್ರ ಮಟ್ಟದ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಯಾಕೂಬ್ ಮಾಸ್ಟರ್ ಕೊಯ್ಯೂರು, ವಿಶೇಷ ಪ್ರಬಂಧಕ್ಕಾಗಿ ಡಾಕ್ಟರೇಟ್ ಗೌರವವನ್ನು ಪಡೆದ ಡಾ. ಭಾಸ್ಕರ ಹೆಗಡೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ವೇಣುಗೋಪಾಲ ಶರ್ಮ, ಇತಿಹಾಸ ಉಪನ್ಯಾಸಕ ಯು. ಉಮಾನಾಥ ಶೆಣೈ, ಪತ್ರಕರ್ತ ಜಿನ್ನಪ್ಪ ಗೌಡ ಬೆಳಾಲು, ತುಳುನಾಡ ಕಂಬಳ ಓಟಗಾರ ಸುರೇಶ್ ಹಕ್ಕೇರಿ ಇವರುಗಳನ್ನು ಹಾಗೂ ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಧರ್ಮೋತ್ಥಾನ ಟ್ರಸ್ಟ್ ಧರ್ಮಸ್ಥಳ ಇದರ  ಪರವಾಗಿ ಕಾರ್ಯದರ್ಶಿ ವೀರು ಶೆಟ್ಟಿ , ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಘಗಳಾದ ಕಸ್ತೂರ್ಬಾ ಸಂಜೀವಿನಿ ಸ್ವಸಹಾಯ ಸಂಘ ಬೆಳಾಲು ಅಧ್ಯಕ್ಷೆ ಶ್ರೀಮತಿ ಮಧುರಾ ಆರ್, ವೀರ ಕೇಸರಿ ಕನ್ಯಾಡಿ ಧರ್ಮಸ್ಥಳದ ಪ್ರಮುಖರಾದ ಸತೀಶ್ ಇವರುಗಳನ್ನು ಸಂಘದ ವತಿಯಿಂದ ಸನ್ಮಾನಿಸಿ, ಗೌರವಾರ್ಪಣೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ವತಿಯಿಂದ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ  ಶಾಲು ಹೊದಿಸಿ, ಫಲಪುಷ್ಪ ನೀಡಿ ಗೌರವಿಸಲಾಯಿತು

ಪತ್ರಕರ್ತ ಜಿಲ್ಲಾ ಸಮಿತಿಯ ಗ್ರಾಮೀಣ ಕಾರ್ಯದರ್ಶಿ ಭುವನೇಶ್, ಪತ್ರಕರ್ತರ ಸಂಘದ ತಾಲೂಕು ಕಾರ್ಯದರ್ಶಿ ಮನೋಹರ ಬಳಂಜ, ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.