ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಜಿಲ್ಲಾ ಪ್ರಶಸ್ತಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಡಂತ್ಯಾರು, ಸ್ಥಾಪನೆಯಾಗಿ ಐದು ವರ್ಷಗಳಿಂದ ತನ್ನ ಸದಸ್ಯರಿಗೆ, ಸಮಾಜಕ್ಕೆ ನೀಡಿದ ಆರ್ಥಿಕ ನೆರವು ಹಾಗೂ ಇತರ ಸೇವಾ ಕಾರ್ಯಗಳನ್ನು ಪರಿಗಣಿಸಿ ನ.27 ರಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉತ್ಕೃಷ್ಟ ಸಹಕಾರಿ ಸೌಧದಲ್ಲಿ ಜರುಗಿದ 106ನೇ ವಾರ್ಷಿಕ ಮಹಾಸಭೆಯಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ. ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು.

ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಲೆನ್ಸಿ ಪಿಂಟೊ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಲೇರಿಯನ್ ಡಿಸೋಜಾ ರವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರು, ಗಣ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.