ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಿಂದ ಗೌರವ
ಮಡಂತ್ಯಾರು: 2019-20ನೇ ಸಾಲಿನಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅತ್ಯುತ್ತಮ ಪ್ರಾಂಚೈಸಿ ನಿರ್ವಹಣಾದಾರರಾಗಿ ಉನ್ನತ ಸಾಧನೆ ಮಾಡಿದ ಮಡಂತ್ಯಾರು ಕಾಲೇಜು ರಸ್ತೆ ಬಳಿ ಕಾರ್ಯಾಚರಿಸುತ್ತಿರುವ ನಂದಿನಿ ಕಾರ್ನರ್ ನ ಮಾಲಕಿ ಶ್ರೀಮತಿ ಭವ್ಯ ತುಳಸಿದಾಸ್ ಪೈ ಇವರಿಗೆ ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದ ವತಿಯಿಂದ ಮಂಗಳೂರಿನಲ್ಲಿ ನಡೆದ 67ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ, ದ.ಕ. ಜಿಲ್ಲಾ ಸಹಕಾರಿ ಸಂಘದ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್, ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರು, ಗಣ್ಯರು ಉಪಸ್ಥಿತರಿದ್ದರು.