ಅರಸಿನಮಕ್ಕಿ: ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ಸಹಕಾರ ಭಾರತಿ ದ.ಕ ಜಿಲ್ಲೆ, ವಿವೇಕಾನಂದ ವಿದ್ಯಾವರ್ಧಕ ಸಂಘ ಪತ್ತೂರು, ವಿವೇಕಾನಂದ ಪಾಲಿಟೆಕ್ನಕ್ ಪುತ್ತೂರು ಇದರ ಆಶ್ರಯದಲ್ಲಿ ಹತ್ಯಡ್ಕ ಪ್ರಾ.ಕೃ.ಪ ಸಹಕಾರಿ ಸಂಘ ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಅರಸಿನಮಕ್ಕಿಯಲ್ಲಿ ನಡೆಯುತ್ತಿರುವ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ನ.28ರಂದು ಜರುಗಿತು.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ದಿಕ್ಸೂಚಿ ಭಾಷಣ ಮಾಡಿದರು. ಹತ್ಯಡ್ಕ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಗ್ರಾಮ ವಿಕಾಸ ಪ್ರಾಂತ ಸಂಯೋಜಕರಾದ ಗುರುರಾಜ್ ಬೆಂಗಳೂರು, ರಮೇಶ್ ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ನ ಪ್ರಾಂಶುಪಾಲ ಎಂ ಗೋಪಿನಾಥ ಶೆಟ್ಟಿ, ಸಹಕಾರ ಭಾರತಿ ಬೆಳ್ತಂಗಡಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ,ಉಪಾಧ್ಯಕ್ಷ ರಾಜು ಕೆ ಸಾಲಿಯಾನ್, ತಾಲೂಕು ಸಂಚಾಲಕ ವಿನಯ ಚಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು.