ಬೆಳ್ತಂಗಡಿ, ಪುತ್ತೂರು, ಸುಳ್ಯ ಮಂಡಲದ ಬಿಜೆಪಿ ಕರ್ನಾಟಕ ಗ್ರಾಮ ಸ್ವರಾಜ್ಯ ಸಮಾವೇಶವನ್ನು ಉದ್ಘಾಟಿಸಿದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು
ಬೆಳ್ತಂಗಡಿ: ಗ್ರಾಮ ಪಂಚಾಯತ್ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ಸಂಘಟನಾ ದೃಷ್ಟಿಯಿಂದ ಬಿಜೆಪಿ ಹಮ್ಮಿಕೊಂಡಿರುವ ‘ಗ್ರಾಮ ಸ್ವರಾಜ್ಯ ಸಮಾವೇಶ’ ಪುತ್ತೂರು, ಸುಳ್ಯ, ಬೆಳ್ತಂಗಡಿ ಮಂಡಲವನ್ನು ಒಳಗೊಂಡ ಕಾರ್ಯಕ್ರಮ ನ.28 ರಂದು ಪುತ್ತೂರಿನ ಸಾಲ್ಮರ ಕೊಟೇಚಾ ಹಾಲ್ನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಶೋಭಾ ಕರಂದ್ಲಾಜೆ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಸುಳ್ಯ ಶಾಸಕ ಎಸ್ ಅಂಗಾರ, ಸಂಸದ ಮುನಿಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ, ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಎಂ., ಪುತ್ತೂರು ಬಿಜೆಪಿ ವಿಭಾಗ ಸಹಸಂಚಾಲಕ ಗೋಪಾಲಕೃಷ್ಣ ಹೇರಳೆ, ಬೆಳ್ತಂಗಡಿ, ಸುಳ್ಯ ಬಿಜೆಪಿ ಮಂಡಲದ ಅಧ್ಯಕ್ಷರು, ಉಪಾಧ್ಯಕ್ಷರು ಉಪಸ್ಥಿತರಿದ್ದರು.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಜನಸ್ನೇಹಿ, ಅಭಿವೃದ್ಧಿ ಪೂರಕ ಯೋಜನೆಗಳನ್ನು, ಆಶಯಗಳನ್ನು ರಾಜ್ಯದ ಮನೆ ಮನೆಗಳಿಗೆ ತಲುಪಿಸುವ ನಿಟ್ಟಿನಲ್ಲಿ ಬಿಜೆಪಿ ಪಕ್ಷ ಈ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.