ಡಿ.10ರಿಂದ 14: ಧರ್ಮಸ್ಥಳ ಲಕ್ಷ ದೀಪೋತ್ಸವ; ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವದ ಕಾರ್ಯಕ್ರಮಗಳು ಡಿ.10 ರಿಂದ 14 ವರೆಗೆ ಜರುಗಲಿದೆ. ಡಿ. 13 ಮತ್ತು 14 ರಂದು ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನಗಳು ನಡೆಯಲಿದೆ.
ಡಿ.13ರಂದು ಅಮೃತವರ್ಷಿನಿ ಸಭಾಭವನದಲ್ಲಿ ನಡೆಯಲಿರುವ ಸರ್ವಧರ್ಮ ಸಮ್ಮೇಳನವನ್ನು ಕರ್ನಾಟಕ ರಾಜ್ಯ ವಸತಿ ಸಚಿವ ವಿ ಸೋಮಣ್ಣ ಉದ್ಘಾಟಿಸಲಿದ್ದಾರೆ. ಶ್ರೀ ಕ್ಷೇತ್ರ ಕನಕಗಿರಿ ಜೈನಮಠದ ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಉಪನ್ಯಾಸಕರಾಗಿ ಬೆಂಗಳೂರು ಸೃಷ್ಟಿ ಮಣಿಪಾಲ್ ಇನ್ಸ್ಟಿಟ್ಯೂಟ್‌ನ ಬೋಧಕ ಕೇಶವ ಮಳಗಿ, ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ರೆ|ಫಾ| ಚೇತನ್ ಲೋಬೋ ಭಾಗವಹಿಸಲಿದ್ದಾರೆ.
ಡಿ.14 ರಂದು ನಡೆಯಲಿರುವ ಸಾಹಿತ್ಯ ಸಮ್ಮೇಳನದಲ್ಲಿ ಹಿರಿಯ ವಿದ್ವಾಂಸ ಹಾಗೂ ವಿಶ್ರಾಂತ ಪ್ರಾಧ್ಯಾಪಕ ವೇದಭೂಷಣ ಡಾ.ಎಸ್ ರಂಗನಾಥ್, ಹಿರಿಯ ಸಾಹಿತಿ ಹಾಗೂ ಖ್ಯಾತ ವಿಮರ್ಷಕ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ, ಪ್ರಾಧ್ಯಾಪಕ ಡಾ.ಜ್ಯೋತಿ ಶಂಕರ್, ಡಾ.ಪುಂಡಿಕಾ ಗಣಪಯ್ಯ ಭಟ್ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.