ಮಂಗಳೂರಿನ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಹರಿಶ್ ಪೂಂಜ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಮಂಗಳೂರು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಹಾಗೂ ಜಿಲ್ಲೆಯ ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳ ಸಹಯೋಗದೊಂದಿಗೆ ಆತ್ಮ ನಿರ್ಭರ್ ಭಾರತ್ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳ ಕಿರು ಸಾಲ ವಿತರಣಾ ಸಮಾರಂಭ ಹಾಗೂ ಇತರೆ ಯೋಜನೆಗಳ ಮಾಹಿತಿ ಕಾರ್ಯಾಗಾರ ಕಾರ್ಯಕ್ರಮ ಡಿ.1 ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕೆ ಪ್ರತಾಪ ಸಿಂಹ ನಾಯಕ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ದ.ಕ.ಜಿಲ್ಲಾ ಶಾಸಕರುಗಳಾದ ಎಸ್. ಪಿ ಅಂಗಾರ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಉಮಾನಾಥ ಕೋಟ್ಯಾನ್, ಬೆಳ್ತಂಗಡಿ ನ.ಪಂ ಅಧ್ಯಕ್ಷೆ ಶ್ರೀಮತಿ ರಜನಿ ಕುಡ್ವ, ಮುಖ್ಯಾಧಿಕಾರಿ ಸುಧಾಕರ್ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.