ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿ ನೀಡಿ, ಸಂಸ್ಥೆಯ ಎಲ್ಲಾ ವಿಭಾಗಗಳನ್ನು ವೀಕ್ಷಿಸಿ, ಸಂಸ್ಥೆಯ ಎಲ್ಲಾ ಸಿಬ್ಬಂದಿ ಹಾಗೂ ಘಟಕದ ಸದಸ್ಯರುಗಳಿಗೆ ಶುಭ ಹಾರೈಸಿ, ಸಂಸ್ಥೆಯು ಇನ್ನೂ ಹೆಚ್ಚಿನ ಸಾಧನೆ ಗೈಯಲಿ ಎಂದು ನುಡಿದರು.
ಈ ಸಂದರ್ಭ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜನಾರ್ಧನರವರು, ಸಂಸ್ಥೆಯ ಹಿರಿಯ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಘಟಕದ ಸದಸ್ಯರು ಉಪಸ್ಥಿತರಿದ್ದು, ಪೂಜ್ಯರಿಗೆ ಗೌರವ ನಮನ ಸಲ್ಲಿಸಿದರು.