ಸಣ್ಣ ನೀರಾವರಿ ಇಲಾಖೆ ಸಹಾಯಕ ಇಂಜಿನಿಯರ್ ಪ್ರಸನ್ನ ನಿಧನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ; ಸಣ್ಣ ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಆಗಿ ಬೆಳ್ತಂಗಡಿ ವಿಭಾಗದಲ್ಲಿ ಕಳೆದ ಎರಡು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಪ್ರಸನ್ನ (37ವ.) ಅವರು ಅಲ್ಪಕಾಲದ ಅಸೌಖ್ಯದಿಂದ ಡಿ. 1 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
2018 ನವಂಬರ್ ತಿಂಗಳಿಂದ ಅವರು ಮಂಗಳೂರು ಘಟಕದ ಬೆಳ್ತಂಗಡಿ ವಿಭಾಗದಲ್ಲಿ ಸಹಾಯಕ ಇಂಜಿನಿಯರ್ ಆಗಿ‌ ಕೆಲಸ‌ ನಿರ್ವಹಿಸುತ್ತಿದ್ದರು. ಎರಡು ತಿಂಗಳ ಹಿಂದೆ ಅನಾರೋಗ್ಯ ಕಾಣಿಸಿಕೊಂಡು ಬಳಿಕ ಅವರು ಬೆಂಗಳೂರು, ಮತ್ತು ಮಂಗಳೂರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮೃತರು ದಾವಣಗೆರೆ ನಿವಾಸಿಯಾಗಿದ್ದು 2009 ರಲ್ಲಿ ಇಲಾಖೆ ಕರ್ತವ್ಯಕ್ಕೆ ಸೇರ್ಪಡೆ ಗೊಂಡು ಅತ್ಯುತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸುತ್ತಾ ಜನಸ್ನೇಹಿ ಅಧಿಕಾರಿಯಾಗಿದ್ದರು. ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.