ಕೊಕ್ಕಡ: ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ (ನಿ) ಉಜಿರೆ ಇದರ ಕೊಕ್ಕಡ ರಬ್ಬರು ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭವು ಡಿ.4 ರಂದು ಜರುಗಿತು.
ಕೊಕ್ಕಡ ಪಂಚಮಿ ಹಿತಾರ್ಯುಧಾಮದ ಡಾ ಮೋಹನದಾಸ ಗೌಡರವರು ನೂತನ ಶಾಖೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಇದರ ಅಧ್ಯಕ್ಷ ಶ್ರೀಧರ್ ಜಿ ಭಿಡೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಉಜಿರೆ ಇದರ ಉಪಾಧ್ಯಕ್ಷ ಅನಂತ ಭಟ್ ಎಂ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ, ಸಂಘದ ನಿರ್ದೇಶಕರಾದ ಹೆಚ್ ಪದ್ಮಗೌಡ, ಬಾಲಕೃಷ್ಣ ಗೌಡ ಕೇರಿಮಾರ್, ಜಯಶ್ರೀ ಡಿ ಎಂ ಗೌಡ ಸೇರಿದಂತೆ ಇತರ ನಿರ್ದೇಶಕರುಗಳು ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.