ಬೆಳ್ತಂಗಡಿ ನಗರದ ಕಲ್ಲಗುಡ್ಡೆ ಎಂಬಲ್ಲಿ ಆಕಸ್ಮಿಕವಾಗಿ ಮರದಿಂದ ಬಿದ್ದು ಮೃತ್ಯು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

 

ಆಕಸ್ಮಿಕವಾಗಿ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತು ವ್ಯಾಪ್ತಿಯ ಕಲ್ಲಗುಡ್ಡೆಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಮರದಿಂದ ಬಿದ್ದು, ವ್ಯಕ್ತಿಯೋರ್ವರು ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತಪಟ್ಟ ದಾರುಣ ಘಟನೆ ಡಿ.೯ರಂದು ಮಧ್ಯಾಹ್ನ ನಡೆದಿದೆ.
ಬೆಳ್ತಂಗಡಿ ಪಟ್ಟಣ ಪಂಚಾಯತು ವ್ಯಾಪ್ತಿಯ ಕಲ್ಲಗುಡ್ಡೆ ನಿವಾಸಿ ಡಾಕಯ್ಯ ( ೬೫ವ) ಈ ದುರ್ಘಟನೆಯಲ್ಲಿ ಮೃತಪಟ್ಟ ನತದೃಷ್ಟರಾಗಿದ್ದಾರೆ. ಇವರು ಇಂದು ಮಧ್ಯಾಹ್ನ ತಮ್ಮ ಮನೆಯ ಸಮೀಪದಲ್ಲಿ ಮರದಿಂದ ಆಕಸ್ಮಿಕವಾಗಿ ಜಾರಿ ಕೆಳಗೆ ಬಿದ್ದು, ಗಂಭೀರ ಗಾಯಗೊಂಡಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಕೂಡಲೇ ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಅವರು ಮೃತಪಟ್ಟರೆನ್ನಲಾಗಿದೆ.
ಮೃತರು ಪತ್ನಿ ಪದ್ಮಾವತಿ, ಪುತ್ರಿಯರಾದ ನಿಶಾ ಮತ್ತು ಉಷಾ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.