ಗೋಹತ್ಯೆ ನಿಷೇಧ ಮಸೂದೆ ಮಂಡನೆಗೆ ವಿಧಾನಸಭೆಯಲ್ಲಿ ಅಂಗೀಕಾರ
ಬೆಳ್ತಂಗಡಿ: ವಿಧಾನಸಭೆಯಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ತಿದ್ದುಪಡಿ ವಿಧೇಯಕ ೨೦೨೦ ಅಂಗೀಕಾರಗೊಂಡಿತು. ವಿರೋಧ ಪಕ್ಷಗಳ ವಿರೋಧದ ನಡುವೆ ಮಸೂದೆಗೆ ಅಂಗೀಕಾರಗೊಂಡಿದ್ದು ಗೋಹತ್ಯೆ ನಿಷೇಧ ವಿಧೇಯಕ ವಿರುದ್ಧ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ರವರು ಮಸೂದೆ ಮಂಡಿಸಿದರು.