ಧರ್ಮಸ್ಥಳ: ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಹಾಗೂ ಅವರ ಕುಟುಂಬ ವರ್ಗದವರು ಡಿ.10ರಂದು ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರಕ್ಕೆ ಭೇಟಿ ನೀಡಿ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಸ್ವಾಮೀಜಿಯವರು ಕ್ಷೇತ್ರದ ವತಿಯಿಂದ ಇವರನ್ನು ಸನ್ಮಾನಿಸಿ, ಗೌರವಿಸಿದರು. ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ಜೊತೆಗಿದ್ದರು.