ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: 8ನೇ ವರ್ಷದ ಪಾದಯಾತ್ರೆಗೆ ಚಾಲನೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಭಗವಾನ್ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಶುಭ ಸಂದರ್ಭದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಗಳು ಡಿ.10ರಿಂದ 14 ರ ವರೆಗೆ ನಡೆಯಲಿದ್ದು, ಇದರ ಅಂಗವಾಗಿ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದ್ವಾರದಿಂದ ಧರ್ಮಸ್ಥಳದವರೆಗೆ 8ನೇ ವರ್ಷದ ಪಾದಾಯಾತ್ರೆ ಇಂದು(ಡಿ.10) ನಡೆಯಿತು.

 

 
ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಶರತ್ ಕೃಷ್ಣ ಪಡುವೆಟ್ನಾಯ, ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ವಸಂತ ಸಾಲ್ಯಾನ್, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಹೆಚ್ ಮಂಜುನಾಥ್, ಉದ್ಯಮಿ ಮೋಹನ ಶೆಟ್ಟಿಗಾರ್, ಜೀವ ವಿಮಾ ನಿಗಮದ ನಿವೃತ್ತ ಅಭಿವೃದ್ಧಿ ಅಧಿಕಾರಿ ಎಂ.ಜೆ ಶೆಟ್ಟಿ, ಉಜಿರೆ ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್, ಉದ್ಯಮಿ ಮೋಹನ ಬೈಪಾಡಿತ್ತಾಯ, ಸಂಧ್ಯಾ ಟ್ರೆಡರ್‍ಸ್ ನ ರಾಜೇಶ್ ಪೈ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ ಕಲ್ಮಂಜ, ಉಪನ್ಯಾಸಕ ಡಾ| ಶ್ರೀನಾಥ್, ಯೋಜನಾ ನಿರ್ದೇಶಕ ವಸಂತ, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷರುಗಳಾದ ಪಿ.ಕೆ ರಾಜು ಪೂಜಾರಿ ಕಾಶಿಪಟ್ಣ, ಬಿ.ಎ ರೈಮಾನ್, ತಿಮ್ಮಪ್ಪ ಗೌಡ, ಶಾರದಾ ರೈ, ಕಿಶೋರ್ ಹೆಗ್ಡೆ, ವಲಯ ಅಧ್ಯಕ್ಷ ಕಾಸಿಂ ಮಲ್ಲಿಗೆ ಮನೆ, ನಾಮದೇವ ರಾವ್ ಮುಂಡಾಜೆ, ಮಂಜುನಾಥ ಕಾಮತ್ ಕೊಲ್ಲಿ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಧನಂಜಯ ಬಿ.ಕೆ, ಸಿಯೋನ್ ಆಶ್ರಮ ಟ್ರಸ್ಟ್ ನ ಯು.ಸಿ ಪೌಲ್ಸ್ ಗಂಡಿಬಾಗಿಲು, ತಾಲೂಕು ಮಹಿಳಾ ಒಕ್ಕೂಟಗಳ ಗೌರವಾಧ್ಯಕ್ಷೆ ಲೋಕೇಶ್ವರಿ ವಿನಯಚಂದ್ರ, ತಾಲೂಕು ಯೋಜನಾಧಿಕಾರಿ ಜಯಕರ ಶೆಟ್ಟಿ, ತಾಲೂಕಿನ ಗಣ್ಯರು, ಧರ್ಮಸ್ಥಳದ ವರ್ತಕರು, ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರುಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಒಕ್ಕೂಟಗಳ ಪದಾಧಿಕಾರಿಗಳು, ಜ್ಞಾನವಿಕಾಸ ಕೇಂದ್ರದ ಸದಸ್ಯರು, ನಾಗರೀಕರು, ಹೆಗ್ಗಡೆ ಅಭಿಮಾನಿಗಳು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ಭಕ್ತರು ಜನಾರ್ದನ ದೇವಸ್ಥಾನದ ಸಮೀಪ ಒಟ್ಟು ಸೇರಿ ಅಲ್ಲಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಹೊರಟರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.