ಬೆಳ್ತಂಗಡಿ: ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಮಸೂದೆ ಮಂಡಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಗರದ ಶ್ರೀಮತಿ ಸುಶ್ಮಿತಾ ಜಯರಾಮ್ ಅವರ ಮನೆಯಲ್ಲಿ ಗೋ ಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್, ಕಾರ್ಯದರ್ಶಿ ಪ್ರಶಾಂತ್ ಪ್ರತಿಮ, ನಗರ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ನ.ಪಂ. ಸದಸ್ಯರಾದ ಶರತ್ ಕುಮಾರ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಯಶವಂತ್ ಮತ್ತು ಪ್ರಧಾನ ಕಾರ್ಯದರ್ಶಿ ವಿನೀತ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.