ಶಾಸಕ ಹರೀಶ್ ಪೂಂಜ ಸೇರಿದಂತೆ ದ.ಕ ಮತ್ತು ಉಡುಪಿ ಜಿಲ್ಲಾ ಬಿಜೆಪಿ ನಾಯಕರುಗಳಿಂದ ಸಿ.ಎಂ ಯಡಿಯೂರಪ್ಪರಿಗೆ ಮನವಿ
ಬೆಳ್ತಂಗಡಿ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡ ವೀರ ಪುರುಷರಾದ ಕೋಟಿ – ಚೆನ್ನಯ್ಯರ ಹೆಸರನ್ನು ನಾಮಕರಣ ಮಾಡುವ ಪ್ರಸ್ತಾಪವನ್ನು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ದ.ಕ ಜಿಲ್ಲಾ ಬಿಜೆಪಿ ನಾಯಕರಿಂದ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಮಂಗಳೂರು ತಾಲೂಕಿನ ಶಾಸಕರಾದ ವೈ. ಭರತ್ ಶೆಟ್ಟಿ, ವಾಸುದೇವ ಕಾಮತ್, ಕಾರ್ಕಳ ಶಾಸಕ ಸುನೀಲ್ ಕುಮಾರ್ ಉಪಸ್ಥಿತರಿದ್ದರು.