ಬೆಳ್ತಂಗಡಿ: ಕಳೆದ ಕೆಲ ಸಮಯದಿಂದ ತುರ್ತು ಚಿಕಿತ್ಸಾ ಸಂದರ್ಭದಲ್ಲಿ ಮಂಗಳೂರಿನಿಂದ ಬೆಂಗಳೂರು ಹಾಗೂ ಕೇರಳ ನಗರಕ್ಕೆ ಅತೀ ಕಡಿಮೆ ಸಮಯದಲ್ಲಿ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಅಂಬ್ಯುಲೆನ್ಸ್ ಚಾಲಕ ಹನೀಫ್ ಬಳಂಜರವರನ್ನು ತುಳು ಅಕಾಡೆಮಿ ಬರ್ಕೆ ಫ್ರೆಂಡ್ಸ್ ಮಂಗಳೂರು ಇವರ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ ಕತ್ತಲ್ ಸಾರ್, ತುಳು ಅಕಾಡೆಮಿ ಬರ್ಕೆ ಪ್ರೆಂಡ್ಸ್ ನ ಮುಖ್ಯಸ್ಥರು, ಪದಾಧಿಕಾರಿಗಳು ಉಪಸ್ಥಿತರಿದ್ದರು.