ಆರಂಬೋಡಿ: ಶಾಲಾ ಮಕ್ಕಳಿಗೆ ಉಚಿತ ಗ್ರಂಥಾಲಯ ಚೀಟಿ ವಿತರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಆರಂಬೋಡಿ:  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್‌ ಇಲಾಖೆಯು ಮಕ್ಕಳಲ್ಲಿ ಓದುವ ಅಭಿರುಚಿಯನ್ನು ಬೆಳೆಸಲು ‘ಓದುವ ಬೆಳಕು’ ಎಂಬ ಕಾರ್ಯಕ್ರಮವನ್ನು ಆರಂಭಿಸಿದೆ‌. ಸಾರ್ವಜನಿಕ ಶಿಕ್ಷಣ ಇಲಾಖೆ ಕೂಡ ಈ ಕಾರ್ಯಕ್ರಮಕ್ಕೆ ಕೈ ಜೋಡಿಸಿದ್ದು, ಕೋವಿಡ್ -19 ರ ಹಿನ್ನೆಲೆಯಲ್ಲಿ ಕುಂಠಿತಗೊಂಡಿರುವ ಮಕ್ಕಳ ಶಿಕ್ಷಣವನ್ನು ಅರ್ಥಪೂರ್ಣವಾಗಿ ಮುಂದುವರೆಸುವ ಅವಶ್ಯಕತೆ ಇದೆ. ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕೆಗಳನ್ನು ಪಾಲಿಸುತ್ತಲೇ ‘ಶಾಲಾ ಗ್ರಂಥಾಲಯ’ ಗಳನ್ನು ಕ್ರಿಯಾಶೀಲಗೊಳಿಸುವುದು ಮತ್ತು ಅವರಿಗೆ ಯೋಜನಾ ಕಾರ್ಯಗಳನ್ನು ನೀಡಿ ಅವರು ಮನೆಯಲ್ಲಿಯೇ ತಮ್ಮ ಕಲಿಯುವಿಕೆಯನ್ನು ಮುಂದುವರೆಸಲು ಸಹಾಯವಾಗುವಂತೆ ‘ಓದುವ ಬೆಳಕು’ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಆರಂಬೋಡಿ ಗ್ರಾ.ಪಂ ಅಧ್ಯಕ್ಷ ಪ್ರಭಾಕರ್ ಹೆಚ್ ತಿಳಿಸಿದರು.

ಅವರು ಆರಂಬೋಡಿ ಗ್ರಾಮ ಪಂಚಾಯತ್  ಸಹಕಾರದಲ್ಲಿ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿಯಲ್ಲಿ ಆರಂಬೋಡಿ ಮತ್ತು ಗುಂಡೂರಿ ಗ್ರಾಮದ ಹೊಕ್ಕಾಡಿಗೋಳಿ, ಆರಂಬೋಡಿ, ಹನ್ನೆರಡು ಕವಲು, ಪಿಲ್ಲಂಬುಗೋಳಿ ಮತ್ತು ಗುಂಡೂರಿ ಶಾಲೆಯ ಮಕ್ಕಳಿಗೆ ಉಚಿತ ಗ್ರಂಥಾಲಯ ಚೀಟಿಗಳನ್ನು ವಿತರಿಸಿ ಮಾತನಾಡಿದರು.

ಶಾಲಾ ಮಕ್ಕಳಿಗೆ ಉಚಿತವಾಗಿ ಗ್ರಂಥಾಲಯದ ನೋಂದಣಿ ಮಾಡಿಸಿ ಪುಸ್ತಕಗಳನ್ನು ಓದಲು ನೀಡಲಾಯಿತು.  ಗ್ರಾ.ಪಂ ಉಪಾಧ್ಯಕ್ಷೆ ಆಶಾ ಶೆಟ್ಟಿ, ಗ್ರಾ.ಪಂ ಸದಸ್ಯರಾದ  ಭವಿತಾ, ರೇಖಾ, ಪಿ.ಡಿ.ಒ ಗಣೇಶ್ ಶೆಟ್ಟಿ, ಹೊಕ್ಕಾಡಿಗೋಳಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ  ಸದಾಶಿವ ಹುಲಿಮೇರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ  ರಾಘವೇಂದ್ರ ಭಟ್, ಮಕ್ಕಳ ಪೋಷಕರು, ಹಳೆ ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತರು, ವಿವಿಧ ಸ್ವ ಸಹಾಯ ಗುಂಪುಗಳ ಸದಸ್ಯರು  ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಸುಮಿತ್ರ ಎಸ್ ಸ್ವಾಗತಿಸಿ, ಪಂಚಾಯತ್ ಕಾರ್ಯದರ್ಶಿ ಸೋಮಶೇಖರ್ ಧನ್ಯವಾದಗೈದರು, ಶಿಕ್ಷಕ  ರಾಜೇಶ್ ನೆಲ್ಯಾಡಿ ಕಾರ್ಯಕ್ರಮವನ್ನು ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.