ಜ.1ರಿಂದ10ನೇಮತ್ತು ಪಿಯುಸಿ ತರಗತಿ ಆರಂಭ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

 

ಜನವರಿ 1 ರಿಂದ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಪ್ರಾರಂಭ

ಬೆಳ್ತಂಗಡಿ: ರಾಜ್ಯದಲ್ಲಿ 2021ರ ಜನವರಿ 1ರಿಂದ 10 ನೆ ತರಗತಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಹಾಗೂ 6 ರಿಂದ 9ನೇ ತರಗತಿ ವರೆಗೆ ವಿದ್ಯಾಗಮ ಕಾರ್ಯಕ್ರಮ ಪ್ರಾರಂಭಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ತರಗತಿಗಳನ್ನು ಪ್ರಾರಂಭಿಸಿ, 15 ದಿನಗಳ ಕಾಲ ಪರಿಸ್ಥಿತಿಯನ್ನು ಅವಲೋಕಿಸಿ ನಂತರ ಇತರ ತರಗತಿಗಳನ್ನು ಪ್ರಾರಂಭಿಸುವ ಕುರಿತು ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು.
ಶಾಲೆಗಳನ್ನು ಮರುಪ್ರಾರಂಭಿಸುವ ಸಂದರ್ಭದಲ್ಲಿ ಸೂಕ್ತ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ರಾಜ್ಯ ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಮಕ್ಕಳು ಶಾಲೆಗೆ ಮತ್ತು ವಿದ್ಯಾಗಮ ಕಾರ್ಯಕ್ರಮಕ್ಕೆ ಹಾಜರಾಗುವಾಗ ಪೋಷಕರ ಅನುಮತಿ ಪತ್ರ ಕಡ್ಡಾಯ. ಅನುಮತಿ ಪತ್ರದಲ್ಲಿ ವಿದ್ಯಾರ್ಥಿಗೆ ಕೋವಿಡ್ 19 ಸೋಂಕಿನ ಲಕ್ಷಣಗಳಿಲ್ಲವೆಂದು ದೃಢೀಕರಿಸಬೇಕು.
ವಸತಿ ಶಾಲೆಗಳಲ್ಲಿ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳು, ಪ್ರವೇಶ ಪಡೆಯುವ 72 ಗಂಟೆಗಳ ಅಂತರದಲ್ಲಿ ಕೋವಿಡ್ 19 ರ ಪರೀಕ್ಷೆ ಮಾಡಿಸಿ, ನೆಗೇಟಿವ್ ವರದಿಯನ್ನು ಸಲ್ಲಿಸಬೇಕು.
ಶಾಲೆ-ಕಾಲೇಜಿಗೆ ಹಾಜರಾತಿ ಕಡ್ಡಾಯವಲ್ಲ. ವಿದ್ಯಾರ್ಥಿಗಳು ಮನೆಯಲ್ಲಿಯೇ ಇದ್ದು ಆನ್ ಲೈನ್, ಯುಟ್ಯೂಬ್ ಚಾನೆಲ್ ಮತ್ತು ಇತರ ಮೂಲಗಳಿಂದಲೂ ಅಭ್ಯಾಸ ಮಾಡಬಹುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ವಿದ್ಯಾರ್ಥಿಗಳಿಗೆ ಅರ್ಧ ದಿನ ಮಾತ್ರ ತರಗತಿ ನಡೆಯಲಿದೆ. ಒಂದು ಕೊಠಡಿಯಲ್ಲಿ ಗರಿಷ್ಠ 15 ವಿದ್ಯಾರ್ಥಿಗಳಿಗೆ ತರಗತಿ ನಡೆಸಬೇಕು.
ವಿದ್ಯಾಗಮ ಕಾರ್ಯಕ್ರಮದಡಿ ವಿದ್ಯಾರ್ಥಿಗಳು ವಾರಕ್ಕೆ ಎರಡು ಬಾರಿ ಶಾಲೆಗೆ ಹಾಜರಾಗಬೇಕಾಗುವುದು ಎಂದು ನಿಧ೯ರಚಿಸಲಾಯಿತು.
ಸಭೆಯಲ್ಲಿ ಶಿಕ್ಷಣ ಸಚಿವ ವರು ಹಾಗೂ ಅಧಿಕಾರಿಗಳು ಉಪಸ್ಥಿತಿ ಇದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.