ಉಪ್ಪಿನಂಗಡಿ: ವಾಟ್ಸಪ್ನಂತಹ ಸಾಮಾಜಿಕ ಜಾಲತಾಣದಲ್ಲಿ ಕಣಿಯೂರು ಗ್ರಾ.ಪಂ. ಮಾಜಿ ಅಧ್ಯಕ್ಷರ ವಿರುದ್ಧ ಮಾನಹಾನಿಕರ ವಿಚಾರಗಳನ್ನು ಪ್ರಸಾರ ಮಾಡಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಬಿಜೆಪಿ ಮುಂದಾಳು, ಕಣಿಯೂರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಸುನಿಲ್ ಸಾಲಿಯಾನ್ರವರ ಕೌಟುಂಬಿಕ ವಿಚಾರಗಳಲ್ಲಿ ಕಪೋಲ ಕಲ್ಪಿತ ಸುಳ್ಳು ಸುದ್ದಿಗಳನ್ನು ಮುದ್ರಿಸಿ ಅವರ ಚಾರಿತ್ಯಕ್ಕೆ ಭಂಗವನ್ನುಂಟು ಮಾಡುವಂತೆ ಸುಳ್ಳು ಅಪಾದನೆಗಳನ್ನು ಮಾಡಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅವರನ್ನು ಸೋಲಿಸಬೇಕೆಂದು ಕರೆ ನೀಡಿರುವ ಸಂದೇಶಗಳನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ವಾಟ್ಸಪ್ನಂತಹ ಜಾಲತಾಣಗಳಲ್ಲಿ ಹರಿಯಬಿಡುತ್ತಿದ್ದಾರೆಂದೂ ಅಪಾದಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ
ಉಪ್ಪಿನಂಗಡಿ ಪೊಲೀಸರು ಮಾನಹಾನಿಕರ ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.