ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ 292 ಮತಗಟ್ಟೆಗಳಲ್ಲಿ ಮತದಾನ ಆರಂಭ

 

 

ತಾಲೂಕಿನ ಎಲ್ಲಾ ಮತಗಟ್ಟೆಗಳಲ್ಲಿ ಮತದಾನ ಆರಂಭ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ೪೬ ಗ್ರಾಮ ಪಂಚಾಯತುಗಳಲ್ಲಿ ಚುನಾಯಿತ ಆಡಳಿತ ಮಂಡಳಿಯ ಸದಸ್ಯರ ಆಯ್ಕೆಗೆ ಇಂದು ( ಡಿ.27ರಂದು) ಬೆಳಗ್ಗೆ 7 ರಿಂದ ಮತದಾನ ಆರಂಭಗೊಂಡಿದ್ದು, ಬೆಳಗ್ಗಿನ ಅವಧಿಯಲ್ಲಿಯೇ ಹೆಚ್ಚು ಸಂಖ್ಯೆಯಲ್ಲಿ ಮತದಾರರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿರುವುದು ಕಂಡು ಬರುತ್ತಿದೆ.


ಬೆಳ್ತಂಗಡಿ ತಾಲೂಕಿನಲ್ಲಿ 12 ಅತೀ ಸೂಕ್ಷ್ಮ, 43 ಸೂಕ್ಷ್ಮ ಹಾಗೂ 237 ಸಾಮಾನ್ಯ ಮತಗಟ್ಟೆಗಳಲ್ಲಿ ಬೆಳಗ್ಗಿಯಿಂದಲೇ ಮತದಾನ ಆರಂಭಗೊಂಡಿದೆ. ತಾಲೂಕಿನಲ್ಲಿ 201 ಮೂಲಮತಗಟ್ಟೆ ಹಾಗೂ 91 ಆಕ್ಸಿಲರಿ ಮತಗಟ್ಟೆ ಸೇರಿದಂತೆ 292 ಮತಗಟ್ಟೆಗಳಿವೆ. ಪ್ರತಿ ಮತಗಟ್ಟೆಯಲ್ಲಿ ಒಬ್ಬ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿ ಹಾಗೂ ಪ್ರತಿ ವಿಭಾಗಕ್ಕೂ ಸಿಬ್ಬಂದಿಗಳಿದ್ದು, ಕಾರ್ಯನಿರ್ವಹಿ

ಸುತ್ತಿದ್ದಾರೆ.ಮತಗಟ್ಟೆಗಳಲ್ಲಿ ಪೊಲೀಸರು ಹಾಗೂ ಹೋಮ್‌ಗಾರ್ಡ್‌ಗಳು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ನಾರಾವಿ, ಕುತ್ಲೂರು ಸೇರಿದಂತೆ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಎಎನ್‌ಎಫ್ ಪೊಲೀಸರು ಹಾಗೂ ಪೊಲೀಸರು ವಿಶೇಷ ಭದ್ರತೆಗಳನ್ನು ಒದಗಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.