ಓಡಿಲ್ನಾಳ: ಇಲ್ಲಿಯ ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ದೇವಸ್ಥಾನದ ಗರ್ಭಗುಡಿ ಮತ್ತು ತೀರ್ಥ ಮಂಟಪದ ಗುದ್ದಲಿ ಪೂಜೆ ಡಿ.28 ರಂದು ಜರಗಿತು.
ದೇವಸ್ಥಾನದ ಅರ್ಚಕ ಹರಿಪ್ರಸಾದ್ ಇರ್ವತ್ರಾಯ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ಮಜಲು ಗುದ್ದಲಿ ಪೂಜೆ ನೆರವೇರಿಸಿದರು.
ಸಂಪತ್ ಕುಮಾರ್ ಜೈನ್ ಸ್ವಸ್ತಿಕ್ ಲುಮಿನರೀಸ್ ಪಡಂಗಡಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮಾಜಿ ಶಾಸಕ ಕೆ ವಸಂತ ಬಂಗೇರ, ಕಾರ್ಯಾಧ್ಯಕ್ಷ ಎಸ್.ಜಯರಾಮ ಶೆಟ್ಟಿ ಪಡಂಗಡಿ, ಪವಿತ್ರಪಾಣಿ ಮೋಹನ್ ಕೆರ್ಮುಣ್ಣಾಯ ಮೈರಾರು, ಪ್ರಧಾನ ಕಾರ್ಯದರ್ಶಿ ಚಂದ್ರಹಾಸ್ ಕೇದೆ, ಕೋಶಾಧಿಕಾರಿ ಗೋಪಾಲ ಶೆಟ್ಟಿ ಕೋರ್ಯಾರು, ಧರ್ಮೋತ್ಥಾನ ಟ್ರಸ್ಟ್ನ ಅಧ್ಯಕ್ಷ ವೃಷಭ ಆರಿಗ ಪರಾರಿ ಗುತ್ತು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜೀರ್ಣೋಧ್ಧಾರ ಸಮಿತಿ ಪಧಾದಿಕಾರಿಗಳು, ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವೃಷಭ ಆರಿಗ ಪರಾರಿ ಗುತ್ತು ಸ್ವಾಗತಿಸಿ, ಶಾಂತಿರಾಜ್ ಜೈನ್ ಧನ್ಯವಾದವಿತ್ತರು