ಎಪ್ರಿಲ್ 29: ಧರ್ಮಸ್ಥಳದಲ್ಲಿ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ:   49ನೇ ವರ್ಷದ ಉಚಿತ ಸಾಮೂಹಿಕ ವಿವಾಹ  ಕಾರ್ಯಕ್ರಮವು ಧರ್ಮಸ್ಥಳದಲ್ಲಿ  ಏಪ್ರಿಲ್ 29 ರಂದು ಸಂಜೆ 6.48ಕ್ಕೆ ಗೋಧೋಳಿ ಲಗ್ನದಲ್ಲಿ  ಜರುಗಲಿದೆ.

ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಇದುವರೆಗೆ ಒಟ್ಟು 12262 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ ನೀಡಲಾಗುವುದು ಹಾಗೂ ಮದುವೆಯ ಎಲ್ಲಾ ವೆಚ್ಚವನ್ನು  ಭರಿಸಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ.

ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 25ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256-266644 8147263422 , 9663464648

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.