ಬೆಳ್ತಂಗಡಿಯಲ್ಲಿ ವಿಶ್ವಮಾನವ ದಿನಾಚರಣೆ

ಬೆಳ್ತಂಗಡಿ: ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾರಣೆಯನ್ನು ವಿಶ್ವಮಾನವ ದಿನಾಚರಣೆಯನ್ನಾಗಿ ಡಿ.29ರಂದು ಬೆಳ್ತಂಗಡಿ ಮಿನಿವಿಧಾನ ಸೌಧದಲ್ಲಿ ಸರಳವಾಗಿ ಆಚರಿಸಲಾಯಿತು.
ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಜೆ. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕೊಕ್ಕಡ ಹೋಬಳಿ ಕಂದಾಯ ನಿರೀಕ್ಷಕ ಪವಾಡಪ್ಪ ಅವರು ಕುವೆಂಪು ಅವರ ವಿಚಾರ ಹಾಗೂ ಅವರು ಸಾಹಿತ್ಯ, ಕಾದಂಬರಿಗಳಲ್ಲಿ ಸಮಾಜಕ್ಕೆ ನೀಡಿದ ಸಮಕಾಲಿನ ಸಂದೇಶಗಳ ಬಗ್ಗೆ ಮಾತನಾಡಿ, ಕನ್ನಡ ಸಾರಸ್ವತ ಲೋಕಕ್ಕೆ ಪ್ರಥಮ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಕುವೆಂಪು ಅವರು ಅಪಾರವಾದ ಪಾಂಡಿತ್ಯವನ್ನು ಹೊಂದಿದ್ದರು. ಇಡೀ ಸಮಾಜದ ನೋವು, ನಮ್ಮ ಸಂಸ್ಕೃತಿ, ಪರಂಪರೆ, ಪ್ರಕೃತಿ ಅವರ ಪ್ರತಿ ಸಾಹಿತ್ಯದಲ್ಲಿ ಬಿಂಬಿತವಾಗಿದೆ. ಇದರಿಂದಾಗಿ ಅವರಿಗೆ ರಾಷ್ಟ್ರಕವಿಯ ಸ್ಥಾನ-ಮಾನ ದೊರೆಯಲು ಸಾಧ್ಯವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪತಹಶೀಲ್ದಾರರು, ಕಂದಾಯ ನಿರೀಕ್ಷಕರು, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಉಪತಹಶೀಲ್ದಾರ್ ಶಂಕರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಹೇಮಾ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.