ಪಾಕಿಸ್ತಾನದ ಪರ ಘೋಷಣೆ ಖಂಡಿಸಿ ಜ.7 ರಂದು ಉಜಿರೆಯಲ್ಲಿ ಬೃಹತ್ ಪ್ರತಿಭಟನೆ

ಬೆಳ್ತಂಗಡಿ: ಉಜಿರೆಯಲ್ಲಿ ಗ್ರಾಮ ಪಂಚಾಯತ್ ಮತಎಣಿಕೆ ವೇಳೆ ಎಸ್‌ಡಿಪಿಐ ಕಾರ್ಯಕರ್ತರು ವಿಜಯೋತ್ಸವದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವುದರ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಜ.7 ರಂದು ಸಂಜೆ 3 ಗಂಟೆಗೆ ಉಜಿರೆ ಬಸ್ ನಿಲ್ದಾಣದ ಬಳಿ ಹಮ್ಮಿಕೊಳ್ಳಲಾಗಿದೆ ಎಂದು ಭಜರಂಗದಳ ಪುತ್ತೂರು ಜಿಲ್ಲಾ ಕಾರ್ಯಾಧ್ಯಕ್ಷ ಭಾಸ್ಕರ ಧರ್ಮಸ್ಥಳ ಹೇಳಿದರು.
ಅವರು ಜ.೪ ರಂದು ಬೆಳ್ತಂಗಡಿಯ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಗ್ರಾಮ ಪಂಚಾಯತ್ ಮತಎಣಿಕೆ ವೇಳೆ ಎಸ್‌ಡಿಪಿಐ ಕಾರ್ಯಕರ್ತರು ವಿಜಯೋತ್ಸವದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವುದರ ವಿರುದ್ಧ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಪೊಲೀಸರಿಗೆ ದೂರು ನೀಡಿದ್ದು, ಇದರ ತನಿಖೆ ಪ್ರಗತಿಯ ಹಂತದಲ್ಲಿದೆ ಎಂದು ತಿಳಿಸಿದರು.
ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಹಾಗೂ ಘಟನೆಯನ್ನು ಖಂಡಿಸಿ ಜ.7 ರಂದು ಸಂಜೆ 3. ಗಂಟೆಗೆ ಉಜಿರೆ ಬಸ್ ನಿಲ್ದಾಣದ ಬಳಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ವಿಭಾಗದ ಕಾರ್ಯದರ್ಶಿ ಶರಣ್ ಪಂಪುವೆಲ್ ಸಹಿತ ಗಣ್ಯರು ಭಾಗವಹಿಸಲಿದ್ದಾರೆ. ಅಲ್ಲದೆ ರಾಜ್ಯ ಮತ್ತು ವಿಭಾಗದ ಪ್ರಮುಖರು, ಹಿರಿಯರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸುಮಾರು ಒಂದು ಸಾವಿರ ಮಂದಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿ.ಹಿಂಪ ತಾಲೂಕು ಅಧ್ಯಕ್ಷ ಸುಬ್ರಹ್ಮಣ್ಯ ಅಗರ್ತ, ಜಿಲ್ಲಾ ಸಹ ಕಾರ್ಯದರ್ಶಿ ನವೀನ್ ನರಿಯ, ಭಜರಂಗದಳ ತಾಲೂಕು ಸಂಯೋಜಕ ಸಂತೋಷ್ ಕುಮಾರ್ ಅತ್ತಾಜೆ, ವಿಹಿಂಪ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.