ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಆರೋಪ ಮಾಡುತ್ತಿರುವ ಎಸ್‌ಡಿಪಿಐ ಹಾಗೂ ಅಪಪ್ರಚಾರ ಮಾಡಿದ ಚಾನಲ್ ರದ್ದು ಮಾಡುವಂತೆ ಯುವ ಮೋರ್ಚಾ ಒತ್ತಾಯ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಉಜಿರೆಯಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣಾ ಮತ ಎಣಿಕೆ ಕೇಂದ್ರದ ಎದುರು ವಿಜಯೋತ್ಸವದ ಸಂದರ್ಭ ಎಸ್‌ಡಿಪಿಐ ಕಾರ್ಯಕರ್ತರು ಪಾಕಿಸ್ತಾನ ಜಿಂದಾಬಾದ್ ಘೊಷಣೆ ಕೂಗಿದ್ದು, ಬಿಜೆಪಿ ಕಾರ್ಯಕರ್ತರೊಬ್ಬರು ಈ ಘೋಷಣೆಯನ್ನು ಕೂಗಿದ್ದಾರೆ ಎಂದು ಸುಳ್ಳು ಸುದ್ದಿಯನ್ನು ಹಬ್ಬಿಸಿದ ಎಸ್‌ಡಿಪಿಐ ಮತ್ತು ಇದನ್ನು ಪ್ರಚಾರ ಮಾಡಿದ ಯುಟ್ಯೂಬ್ ಚಾನಲನ್ನು ರದ್ದು ಮಾಡಬೇಕು ಎಂದು ಬಿಜೆಪಿ ಯುವ ಮೋರ್ಚಾದ ತಾಲೂಕು ಅಧ್ಯಕ್ಷ ಯಶವಂತ ಗೌಡ ಬೆಳಾಲು ಮತ್ತು ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಯತೀಶ್ ಶೆಟ್ಟಿ ಒತ್ತಾಯಿಸಿದರು.
ಅವರು ಜ.4 ರಂದು ಬೆಳ್ತಂಗಡಿ ಪ್ರವಾಸಿ ಬಂಗಲೆಯಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಎಸ್‌ಡಿಪಿಐ ಕಾರ್ಯಕರ್ತರು ಈ ಘೋಷಣೆ ಕೂಗಿರುವುದನ್ನು ಗಮನಿಸಿ 6 ಮಂದಿ ಆರೋಪಿಗಳನ್ನು ಈಗಾಗಲೇ ಬೆಳ್ತಂಗಡಿ ಪೊಲೀಸರು ದಸ್ತಗಿರಿ ಮಾಡಿಕೊಂಡಿರುತ್ತಾರೆ. ಬಿಜೆಪಿ ಕಾರ್ಯಕರ್ತರು ದೇಶಕ್ಕಾಗಿ ಹೋರಾಟ ಮಾಡಿ ದೇಶಕ್ಕೆ ತಾಯಿಯ ಸ್ಥಾನ ನೀಡಿದವರು.
ಎಸ್‌ಡಿಪಿಐ ದೇಶ ವಿರೋಧಿ ಚಟುವಟಿಕೆ ನಡೆಸುತ್ತಿದೆ. ಬಿಜೆಪಿ ಕಾರ್ಯಕರ್ತ ಪವನ್ ಶೆಟ್ಟಿ ಉಜಿರೆ ಇವರ ಮೇಲೆ ಸುಳ್ಳು ಆರೋಪ ಮಾಡಿ ಬೇರೆ ಫೋಟೋ ಎಡಿಟ್ ಮಾಡಲಾಗಿದೆ. ಇದು ವೈಯುಕ್ತಿಕ ದ್ವೇಷದಿಂದ ಮಾಡಿದ್ದಾರೆ ಎಂದು ಆರೋಪಿಸಿದರು. ಈ ಬಗ್ಗೆ ಪವನ್ ರವರು ಸ್ಪಷ್ಟನೆ ನೀಡುತ್ತಾ, ವಿಜಯೋತ್ಸವ ಸಂದರ್ಭ ನಾನು ಬಂದು ಹೋಗಿದ್ದೆ, ಅಲ್ಲದೆ ಆ ದಿನ ನೀಲಿ ಶರ್ಟ್ ಧರಿಸಿದ್ದು, ಬಿಳಿ ಶರ್ಟ್‌ನ ಫೋಟೊವನ್ನು ಎಡಿಟ್ ಮಾಡಿದ್ದಾರೆ. ಇದು ಸುಳ್ಳು. ಈ ಬಗ್ಗೆ ೩ ಮಂದಿಯ ಮೇಲೆ ದೂರು ನೀಡಲಾಗಿದ್ದು, ಮಾನ ನಷ್ಟ ಪರಿಹಾರಕ್ಕೂ ದೂರು ನೀಡಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಸುಧಾಕರ ಧರ್ಮಸ್ಥಳ, ತಾಲೂಕು ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಮಂಡಲದ ಉಪಾಧ್ಯಕ್ಷ ಪ್ರಮೋದ್ ದಿಡುಪೆ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.