ಬೆಳ್ತಂಗಡಿ: ದ.ಕ. ಜಿಲ್ಲಾ ಬಿಜೆಪಿ ಎಸ್.ಟಿ ಮೋರ್ಚಾದ ಕಾರ್ಯಕಾರಿಣಿ ಸಭೆಯು ಜ.4ರಂದು ಬೆಳ್ತಂಗಡಿ ಮಂಜುನಾಥೇಶ್ವರ ಕಲಾಭವನದಲ್ಲಿ ಜರುಗಿತು.
ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಉದ್ಘಾಟಿಸಿದರು. ಎಸ್.ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಚೆನ್ನಕೇಶವ ಅರಸ ಮಜಲು ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ರಾಜ್ಯ ಎಸ್.ಟಿ ಮೋರ್ಚಾದ ಅಧ್ಯಕ್ಷ ತಿಪ್ಪೆರಾಜ ಹವಾಲ್ದಾರ್, ಉಪಾಧ್ಯಕ್ಷ ಮಂಜುನಾಥ್ ಎನ್.ಎಸ್, ಪ್ರಧಾನ ಕಾಯದರ್ಶಿ ನರಸಿಂಹ ನಾಯಕ್, ಜಿ.ಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಜಿ.ಪಂ ಸದಸ್ಯ ಕೊರಗಪ್ಪ ನಾಯ್ಕ, ದ.ಕ ಜಿಲ್ಲಾ ಎಸ್.ಟಿ ಮೋರ್ಚಾ ಪ್ರಭಾರಿ ಜಯಶ್ರೀ ಕರ್ಕೇರ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.