ನಾಳ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಭುವನೇಶ್ ಜಿ.

ನಾಳ : ಇಲ್ಲಿಯ ಶ್ರೀ ದುರ್ಗಾಪರಮೇಶ್ವರಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಭುವನೇಶ್ ಜಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಭುವನೇಶ್ ಜಿ.ಇವರು ವಿಜಯ ಕರ್ನಾಟಕ ದಿನಪತ್ರಿಕೆ ವರದಿಗಾರರಾಗಿದ್ದಾರೆ ಹಾಗೂ ಈ ಹಿಂದೆ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ, ಪ್ರಸ್ತುತ ಜಿಲ್ಲಾ ಗ್ರಾಮೀಣ ಕಾರ್ಯದರ್ಶಿಯಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ವ್ಯವಸ್ಥಾಪನ ಸಮಿತಿ ಸದಸ್ಯರಾಗಿ ಜನಾರ್ದನ ಪೂಜಾರಿ, ಪ್ರಧಾನ ಅರ್ಚಕ ರಾಘವೇಂದ್ರ ಅಸ್ರಣ್ಣ, ಅಂಬಾ ಆಳ್ವ , ದಿನೇಶ್ ಗೌಡ ಕೆ, ವಿಜಯ ಹೆಚ್. ಪ್ರಸಾದ್, ಉಮೇಶ್ ನಾಯ್ಕ, ರಾಜೇಶ್ ಶೆಟ್ಟಿಯವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಅಡಳಿತ ಅಧಿಕಾರಿ ಮಲ್ಲೇಶ್ ಜಿ.ಹೆಚ್. ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ದೇವಸ್ಥಾನದ ಪ್ರಬಂಧಕ ಗಿರೀಶ್ ಶೆಟ್ಟಿ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.