ಪಾಕಿಸ್ತಾನ್ ಪರ ಘೋಷಣೆ : ಕ್ಯಾಂಪಸ್ ಫ್ರಂಟ್ ಪ್ರತಿಭಟನೆ
*ಬೆಳ್ತಂಗಡಿ :* ಇತ್ತೀಚೆಗೆ ಉಜಿರೆಯಲ್ಲಿ ನಡೆದ
ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವದ ನಡುವೆ ಪಾಕಿಸ್ತಾನ ಪರ ಘೋಷಣೆ ಕೂಗಿದರೆಂದು ಆರೋಪಿಸಿ, ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ವತಿಯಿಂದ ಬೆಳ್ತಂಗಡಿಯಲ್ಲಿ ಜ.5ರಂದು ಪ್ರತಿಭಟನೆ ನಡೆಯಿತು.
ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ಸದಸ್ಯ ಇಮ್ರಾನ್ ಪಾಂಡವರಕಲ್ಲು ಮಾತನಾಡಿ, ದೇಶದ್ರೋಹಿಗಳನ್ನು ಬಂದಿಸಲು ಒತ್ತಾಯಿಸಿದರು. ಪ್ರತಿಭಟನೆಕಾರರು ಬಿಜೆಪಿ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾಧ್ಯಕ್ಷ ಸಫ್ವಾನ್ ಸುನ್ನತ್ಕೆರೆ, ಜಿಲ್ಲಾ ಸಮಿತಿ ಸದಸ್ಯರಾದ ಶಹೀರ್, ನಾಸಿರ್ , ಇಮ್ರಾನ್ ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ಯಾಸೀನ್ ಬಂಗೇರಕಟ್ಟೆ ಸ್ವಾಗತಿಸಿ ನಿರೂಪಿಸಿದರು.