ಬೆಳ್ತಂಗಡಿ: ದೆಹಲಿಯ ಕೆಂಪುಕೋಟೆಯಲ್ಲಿ ಜ.೨೬ ರಂದು ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್ನಲ್ಲಿ ಭಾಗವಹಿಸಲು ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಸೆಕೆಂಡರಿ ವಿಭಾಗದ ಸಹಶಿಕ್ಷಕ ಕೆ ಧರಣೇಂದ್ರ ಜೈನ್ ಹಾಗೂ ಅನುಷಾ ದಂಪತಿ ಪುತ್ರಿ ಅಂಚಿತಾ ಜೈನ್ ಆಯ್ಕೆಯಾಗಿದ್ದಾರೆ.
ಮೂಡಿಗೆರೆಯ ತೋಟಗಾರಿಕಾ ಮಹಾವಿದ್ಯಾಲಯದಲ್ಲಿ ತೋಟಗಾರಿಕಾ ವಿಭಾಗದ ೩ನೇ ಸೆಮಿಸ್ಟರ್ ವಿದ್ಯಾರ್ಥಿನಿಯಾಗಿರುವ ಇವರು ವಿವಿಧ ಕಡೆಗಳಲ್ಲಿ ಗಣರಾಜ್ಯೋತ್ಸವ ಪೂರ್ವ ಸಿದ್ಧತಾ ಶಿಬಿರದಲ್ಲಿ ಭಾಗವಹಿಸಿ ಆಯ್ಕೆಯಾದ ಒಟ್ಟು ೭ ವಿದ್ಯಾರ್ಥಿಗಳಲ್ಲಿ ರಾಜ್ಯಕ್ಕೆ ಮೊದಲ ಸ್ಥಾನಿಯಾಗಿ ಆಯ್ಕೆಗೊಂಡು ಇದೀಗ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡಿನ ೧ ತಿಂಗಳ ತರಬೇತಿಗಾಗಿ ದೆಹಲಿಗೆ ತೆರಳಿದ್ದಾರೆ.