ಕುಡಿದ ಮತ್ತಿನಲ್ಲಿ ಪತಿಯಿಂದ ಪತ್ನಿ ಕೊಲೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ನೆರಿಯ ಗಂಡಿಬಾಗಿಲು ಸಮೀಪ ಕುಡಿದ ಮತ್ತಿನಲ್ಲಿ   ಪತ್ನಿಯನ್ನು ಹೊಡೆದು ಕೊಲೆಗೈದ ಪತಿ

ಮೃತ ಮಹಿಳೆ ಸೌಮ್ಯ

ಬೆಳ್ತಂಗಡಿ: ತಾಲೂಕಿನ ನೆರಿಯಾ ಗಂಡಿಬಾಗಿಲು ಸಮೀಪ ಕುಡಿದ ಮತ್ತಿನಲ್ಲಿ ಪತಿಯಿಂದ ಪತ್ನಿಯ ಹೊಡೆದು ಕೊಲೆಗೈದ ಘಟನೆ ಜ.7 ರಂದು ರಾತ್ರಿ‌‌ ನಡೆದಿದೆ.

ನೆರಿಯ ಗ್ರಾಮದ ಗಂಡಿಬಾಗಿಲು ನಿವಾಸಿ ಸೌಮ್ಯ ಫ್ರಾನ್ಸಿಸ್ (40.ವ) ಕೊಲೆಯಾಗಿದ್ದು, ಈಕೆಯ ಪತಿ ಜಾನ್ಸನ್ (47) ಕೊಲೆಗೈದ ಆರೋಪಿ.

ಆರೋಪಿ ಜಾನ್ಸನ್

ಇವರು ಮೂಲತಃ ಕೇರಳದ ಇರುಟ್ಟಿ ನಿವಾಸಿಗಳಾಗಿದ್ದು, ಗಂಡಿಬಾಗಿಲು ಸಮೀಪ ಜಮೀನು ಹೊಂದಿದ್ದರು. ಇಬ್ಬರು ರಬ್ಬರ್ ಟ್ಯಾಪಿಂಗ್ ವೃತ್ತಿ ನಿರ್ವಹಿಸುತ್ತಿದ್ದು, ಪ್ರತಿ ನಿತ್ಯ ಪತಿ ಪತ್ನಿ ಮಧ್ಯೆ ಗಲಾಟೆ ನಡೆಯುತ್ತಿತ್ತು. ಗುರುವಾರ ವಿಕೋಪಕ್ಕೆ ತೆರಳಿದ್ದು, ಪತಿ ಜಾನ್ಸನ್ ಕಟ್ಟಿಗೆಯ ತುಂಡಿನಲ್ಲಿ ತಮ್ಮ ಪತ್ನಿಗೆ  ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ರಾತ್ರಿ 11 ಗಂಟೆಗೆ ಘಟನೆ ಸಂಭವಿಸಿದ್ದು, ಕುಸಿದು ಬಿದ್ದ ಸೌಮ್ಯ ಅವರನ್ನು ತಕ್ಷಣ ಜಾನ್ಸನ್  ಸ್ಥಳೀಯರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ತೆರಳಬೇಕಾದರೆ  ದಾರಿ ಮಧ್ಯೆ ಸೌಮ್ಯ ಕೊನೆಯುಸಿರೆಳೆದಿದ್ದಾರೆ. ಇವರಿಗೆ 10 ವರ್ಷದ ಹೆಣ್ಣು ಮಗುವೊಂದಿದೆ.

ಘಟನೆ ಕುರಿತು ಸೌಮ್ಯ ಅವರ ಸಹೋದರ ಸನೋಜ್ ಫ್ರಾನ್ಸಿಸ್ ಧರ್ಮಸ್ಥಳ ಠಾಣೆಗೆ ನೀಡಿದ ದೂರಿನಂತೆ ಪತಿ ಜಾನ್ಸನ್ ರನ್ನು ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಮಾರ್ಗದರ್ಶನದಲ್ಲಿ ಧರ್ಮಸ್ಥಳ ಠಾಣೆ ಉಪನಿರೀಕ್ಷಕ ಪವನ್ ಕುಮಾರ್ ಸ್ಥಳಕ್ಕೆ ಭೇಟಿ‌ ನೀಡಿ ಆರೋಪಿಯನ್ನು ಬಂಧಿಸಿದ್ದಾರೆ. ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.