ಹಕ್ಕಿ ಜ್ವರ ಆತಂಕದ ಹಿನ್ನೆಲೆಯಲ್ಲಿ ಆರೋಗ್ಯಾಧಿಕಾರಿಗಳಿಂದ ಜನರಿಗೆ ಎಚ್ಚರಿಕೆಯ ಸೂಚನೆ
ಕಲ್ಮಂಜ: ಕಲ್ಮಂಜ ಗ್ರಾಮದ ನಿಡಿಗಲ್ ಮಜಲು ಎಂಬಲ್ಲಿ ಎರಡು ಹದ್ದುಗಳ ಕೊಳೆತ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಹದ್ದುಗಳ ಮೃತದೇಹ ಸಂಪೂರ್ಣ ಕೊಳೆತಿರುವ ಕಾರಣ ಪರೀಕ್ಷೆಗೆ ಮಾದರಿ ಕಳಿಸಲು ಅಸಾಧ್ಯವಾಗಿದ್ದು, ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಪರಿಸರದಲ್ಲಿ ಎಚ್ಚರಿಕೆಯಿಂದ ಇರುವಂತೆ ಆರೋಗ್ಯಾಧಿಕಾರಿಗಳು ಸೂಚನೆ ನೀಡಿದ್ದಾರೆ.