ಮಾಯಾ ದೇವಸ್ಥಾನದಲ್ಲಿ ಸಂಸ್ಕಾರ ಶಿಬಿರದ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಕ್ಕಳಿಗೆ ಸಂಸ್ಕಾರಭರಿತ ಶಿಕ್ಷಣದ ಅಗತ್ಯವಿದೆ: ಹೆಚ್. ಪದ್ಮಗೌಡ

ಬೆಳಾಲು: ಶ್ರೀ ಮಾಯಾ ಮಹಾದೇವ ದೇವಸ್ಥಾನ ಮಾಯಾ ಇದರ ಆಶ್ರಯದಲ್ಲಿ ಶ್ರೀ ಮಾಯಾ ಮಹೇಶ್ವರ ಭಜನಾ ಮಂಡಳಿಯ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಕಾರ ಶಿಬಿರದ ಉದ್ಘಾಟನೆ ಜ.10 ರಂದು ಶ್ರೀ ಮಾಯಾ ಮಹಾದೇವ ದೇವಸ್ಥಾನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಹಾಗೂ ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೆಚ್.ಪದ್ಮಗೌಡ ಉದ್ಘಾಟಿಸಿ ಮಾತನಾಡಿ, ಇಂತಹ ಸಂದರ್ಭದಲ್ಲಿ ಈ ಶಿಬಿರದ ಆಯೋಜನೆಯು ಅರ್ಥಪೂರ್ಣವಾಗಿದೆ. ಮಕ್ಕಳಿಗೆ ಸಂಸ್ಕಾರಭರಿತ ಶಿಕ್ಷಣ ಅಗತ್ಯವಿದೆ. ಸಣ್ಣ ಮಕ್ಕಳಿಗೆ ಸೂಕ್ತ ಸಮಯದಲ್ಲಿ ಇಂತಹ ಶಿಬಿರದಿಂದ ಸಮಾಜದಲ್ಲಿ ಬದುಕುವ ಜೊತೆಗೆ ಉತ್ತಮ ನಾಗರಿಕರಾಗಿ ಬದುಕಲು ಪ್ರೇರಣೆಯಾಗುತ್ತದೆ ಎಂದರು.
ಮುಖ್ಯ ಅತಿಥಿಗಳಗಿ ಭಾಗವಹಿಸಿದ್ದ ಕೊಲ್ಪಾಡಿ ಶ್ರಿ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಬೆಳಾಲು ಶ್ರೀ ಸರಸ್ವತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕ ಕೆ. ರಾಜಾರಾಮ ಶರ್ಮರು ಮಾತನಾಡಿ, ಶ್ರದ್ಧೆಯಿಂದ ಮಾಡುವ ಯಾವುದೇ ಕೆಲಸದಲ್ಲಿ ಯಶಸ್ವಿ ಸಾಧ್ಯ. ಮಕ್ಕಳು ಭಗವದ್ಗೀತೆ ಸೇರಿದಂತೆ ಯಾವುದೇ ಪುಸ್ತಕವನ್ನು ಓದುವ ಹವ್ಯಾಸ ಬೆಳೆಸಿಕೊಂಡಾಗ ಸಂಸ್ಕಾರ ಭರಿತ ಜೀವನಕ್ಕೆ ಸಹಕಾರಿಯಾಗುವುದು ಎಂದರು.
ನಿವೃತ್ತ ಸಹಾಯಕ ಕೃಷಿ ಅಧಿಕಾರಿ ನಾರಾಯಣ ಸುವರ್ಣ, ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ, ನ್ಯಾಯವಾದಿ ಶ್ರೀನಿವಾಸ ಗೌಡ ಮಾತನಾಡಿ ಶುಭ ಹಾರೈಸಿದರು.
ಕಾರ್ಯಕ್ರಮದ ಸಂಯೋಜಕ ಬೆಳಾಲು ಶ್ರೀ.ಧ.ಮಂ ಪ್ರೌಢಶಾಲಾ ಮುಖ್ಯಶಿಕ್ಷಕ ರಾಮಕೃಷ್ಣ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ಈ ಶಿಬಿರವು 15 ವಾರವೂ ಪ್ರತಿ ಆದಿತ್ಯವಾರ ಒಂದು ಗಂಟೆ ನಡೆಯಲಿದ್ದು, ವಿವಿಧ ಗಣ್ಯರಿಂದ ದಿನ ವಿಶೇಷ, ಪಂಚಾಂಗ, ದಿನಚರಿ, ಚಟುವಟಿಕೆ ಜವಾಬ್ಧಾರಿ, ಪರಿಸರ ಶುಚಿತ್ವ, ನಾಗರಿಕ ಪ್ರಜ್ಞೆ, ಜನಜಾಗೃತಿ, ಕುಟುಂಬ, ನೆರೆಕರೆ ಆರಾಧನಾ ಕೇಂದ್ರ, ವ್ಯಕ್ತಿತ್ವ ಮೊದಲಾದ ವಿಷಯಗಳ ಬಗ್ಗೆ ಪಾರಂಪರಿಕ ಆಚರಣೆಗಳು, ಪುರಾಣ ಪ್ರವಚನಗಳು ನಡೆಯಲಿದ್ದು, ಮುಂದಿನ ದಿನಗಳಲ್ಲಿ ಅನಂತೋಡಿ ಮತ್ತು ಕೊಲ್ಪಾಡಿಯಲ್ಲಿಯೂ ಶಿಬಿರ ಆಯೋಜಿಸಲಾಗುವುದು ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಮಾಯಾ ಮಹೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಕೃಷ್ಣಪ್ಪ ಗೌಡ ಬೆರ್ಕೆಜಾಲು ವಹಿಸಿದ್ದರು.
ಮಾಯಾ ಫ್ರೆಂಡ್ಸ್ ಅಧ್ಯಕ್ಷ ರಾಧಾಕೃಷ್ಣ ಮಾಯಾ, ಭಜನಾ ಮಂಡಳಿಯ ಮಾಜಿ ಅಧ್ಯಕ್ಷ ಹಿರಿಯರಾದ ಕುಂಭ ಗೌಡ, ಸಂಪನ್ಮೂಲ ವ್ಯಕ್ತಿ ಲಕ್ಷ್ಮಣ ಗೌಡ ಪುಳಿತ್ತಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಜ್ಞಾನವಿಕಾಸ ಕೆಂದ್ರಗಳ ಪದಾಧಿಕಾರಿಗಳು, ಸದಸ್ಯರು, ಭಕ್ತಾಧಿಗಳು, ಮಕ್ಕಳು ಉಪಸ್ಥಿತರಿದ್ದರು. ಭಜನಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಸಹಕರಿಸಿದರು.
ಭಜನಾ ಮಂಡಳಿಯ ಮಾಜಿ ಅಧ್ಯಕ್ಷ, ಮಾಯಾ ಒಕ್ಕೂಟ ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗಂಗಾಧರ ಸಾಲಿಯಾನ್ ಸ್ವಾಗತಿಸಿದರು. ಭಜನಾ ಮಂಡಳಿ ಸಲಹೆಗಾರ ನ್ಯಾಚುರೋಪತಿ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಧಮೇಂದ್ರ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಭಜನಾ ಮಂಡಳಿ ಗೌರವಾಧ್ಯಕ್ಷ ವಸಂತ ಎಂ ಕೆ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.