1ರಿಂದ 4ನೇ ತರಗತಿ ವರೆಗಿನ ಮಕ್ಕಳಿಗೆ ಆಕಾಶವಾಣಿ ಮೂಲಕ ಹೊಸ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆಯು ಆಕಾಶವಾಣಿ ಮೂಲಕ ಜ.11ರಿಂದ `ಕಲಿಯುತ್ತಾ ನಲಿಯೋಣ’ ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
1ರಿಂದ 4ನೇ ತರಗತಿವರೆಗೆ ಮಕ್ಕಳಿಗಾಗಿ ಇರುವ `ನಲಿ-ಕಲಿ’ ಮತ್ತು `ಕಲಿ-ನಲಿ’ ಕಾರ್ಯಕ್ರಮಗಳನ್ನು ಜ.11ರಿಂದ ಎ.5ರವರೆಗೆ ಆಕಾಶವಾಣಿ ಪ್ರಸಾರ ಮಾಡಲಿದೆ. ಸೋಮವಾರದಿಂದ ಶುಕ್ರವಾರದವರೆಗೆ ನಿತ್ಯ ಬೆಳಗ್ಗೆ 10ರಿಂದ 10.15ರ ವರೆಗೆ ಒಂದು ಮತ್ತು ಎರಡನೇ ತರಗತಿಗಳಿಗಾಗಿ ಹಾಗೂ 10.15ರಿಂದ 10.30ರ ವರೆಗೆ 3 ಮತ್ತು 4ನೇ ತರಗತಿಗೆ ಹಾಡು, ಕಥೆ, ನಾಟಕ, ಸಂಭಾಷಣೆ, ಒಗಟು ಮತ್ತು ವಿವಿಧ ಅಸಕ್ತಿದಾಯಕ ಕಾರ್ಯಕ್ರಮಗಳ ಮೂಲಕ ಆಯಾ ತರಗತಿಗಳ ಕಲಿಕೆ ಮುಂದುವರಿಯುವಂತೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.
1ರಿಂದ 4ನೇ ತರಗತಿ ವರೆಗೆ ಓದುತ್ತಿರುವ ಮಕ್ಕಳ ಎಲ್ಲ ಪೋಷಕರು ಈ ಕಾರ್ಯಕ್ರಮವನ್ನು ಮಕ್ಕಳೊಂದಿಗೆ ಆಲಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.
ಮಕ್ಕಳ ಪ್ರತಿಭೆಗೂ ಅವಕಾಶ: ಮಕ್ಕಳು ಕಥೆ, ಹಾಡು, ಒಗಟು ಹೇಳುವುದಾದರೆ, ಅದನ್ನು ವಾಟ್ಸ್‌ಫ್ ನಂಬರ್ 9449417612 ಕ್ಕೆ ಕಳುಹಿಸಿದರೆ ಪ್ರಸಾರ ಮಾಡಲಾಗುವುದು. ಈ ಕಾರ್ಯಕ್ರಮ ರಾಜ್ಯದ 13 ಆಕಾಶವಾಣಿ ಕೇಂದ್ರಗಳಿಂದ ಪ್ರಸಾರವಾಗಿ, ಬಳಿಕ ಯೂಟ್ಯೂಬ್‌ನಲ್ಲಿ ಲಭ್ಯವಿರುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.