ಅಳದಂಗಡಿ: ಶ್ರೀ ಸೋಮನಾಥೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ವರ್ಷಾವಧಿ ಜಾಥ್ರೋತ್ಸವವು ಜ.14ರಿಂದ 20ರವರೆಗೆ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಪ್ರತಿದಿನ ವೈದಿಕ ವಿಧಿ ವಿಧಾನಗಳು, ವಿವಿಧ ಉತ್ಸವಾಧಿ ಪೂಜೆಗಳು, ಅನ್ನಸಂತರ್ಪಣೆ, ರಂಗಪೂಜೆ, ದೇವರಿಗೆ ವಿಶೇಷ ಪೂಜೆ ನಡೆಯಲಿದೆ.
ಜ.೨೦ರಂದು ಶ್ರೀ ದೇವರ ದರ್ಶನ ಬಲಿ, ಭಜನೆ, ಮಹಾರಥೋತ್ಸವ, ಸುಡುಮದ್ದು ಪ್ರದರ್ಶನ, ಶ್ರೀ ಕೊಡಮಣಿತ್ತಾಯ ದೈವದ ನೇಮ, ದೈವ ದೇವರ ಭೇಟಿ, ಜ.೨೧ರಂದು ಶ್ರೀ ದೇವರ ಸನ್ನಿಧಿಯಲ್ಲಿ ಸಂಪ್ರೋಕ್ಷಣೆ ನಡೆಯಲಿದೆ. ಹಾಗೂ ಜ.೨೨ ರಂದು ಮಡಂತಿಮಾರು ದೈವಸ್ಥಾನದಲ್ಲಿ ಶ್ರೀ ಕೊಡಮಣಿತ್ತಾಯ ದೈವದ ನೇಮ ನಡೆಯಲಿದೆ ಎಂದು ಅನುವಂಶೀಯ ಆಡಳಿತ ಮೋಕ್ತೇಸರರಾದ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರು ತಿಳಿಸಿದ್ದಾರೆ.