ಪುದುವೆಟ್ಟು: ಇಲ್ಲಿಯ ಬೊಳ್ಮನಾರು ನಿವಾಸಿ ಉಮೇಶ ಪೂಜಾರಿ(54.ವ) ರವರು ಹೃದಯಾಘಾತದಿಂದ ಜ.13 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ ಪ್ರಾರಂಭದಲ್ಲಿ ರಕ್ತ ವಾಂತಿ ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಜ.13 ರಂದು ಬೆಳಗ್ಗಿನ ಜಾವ ಕೊನೆಯುಸಿರೆಳೆದರು.
ಇವರು ಪುದುವೆಟ್ಟು ಶ್ರೀ ನಾರಾಯಣ ಗುರು ಸೇವಾ ಸಂಘದ ಗ್ರಾಮ ಸಮಿತಿಯ ಅಧ್ಯಕ್ಷರಾಗಿ, ನಂತರ ಗೌರವಾಧ್ಯಕ್ಷರಾಗಿ ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದರು.
ಮೃತರು ಪತ್ನಿ ಪ್ರತಿಮಾ, ಮಕ್ಕಳಾದ ಪ್ರಕ್ಷಾ ಮತ್ತು ಪ್ರತೀಶ್ , ಸಹೋದರ, ಸಹೋದರಿಯರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.