ಕೊಕ್ಕಡದಲ್ಲಿ ಆಕಸ್ಮಿಕ ಬೆಂಕಿ ಅವಘಡ: 3 ಕ್ವಿಂಟಾಲ್‌ಗೂ ಮಿಕ್ಕಿ ರಬ್ಬರ್, ದಾಖಲೆ ಪತ್ರಗಳು ಬೆಂಕಿಗಾಹುತಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕೊಕ್ಕಡ: ಇಲ್ಲಿಯ ಪಿಜಿನಡ್ಕ ಪಿ.ಕೆ ಚೀಂಕ್ರ ಎಂಬವರ ಮನೆ ಹಾಗೂ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 3 ಕ್ವಿಂಟಾಲ್‌ಗೂ ಮಿಕ್ಕಿ ರಬ್ಬರ್ ಶೀಟ್ ಹಾಗೂ ಮನೆಯ ಅಗತ್ಯ ದಾಖಲೆ ಪತ್ರಗಳು, ನಗದು ಬೆಂಕಿಗಾಹುತಿಯಾದ ಘಟನೆ ಜ.13 ರಂದು ಬೆಳಗ್ಗೆ ನಡೆದಿದೆ.


ಕೊಕ್ಕಡ ಗ್ರಾಮದ ಪಿಜಿನಡ್ಕ ಪಿ.ಕೆ ಚೀಂಕ್ರರವರು ಹೊಸಮನೆ ಕಟ್ಟುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಹೊಸ ಮನೆಯಲ್ಲಿಯೇ ಇರುತ್ತಿದ್ದ ಮನೆ ಮಂದಿ ಅಡುಗೆ ಮಾತ್ರ ಹಳೆ ಮನೆಯಲ್ಲಿ ಮಾಡುತ್ತಿದ್ದರು. ಹಳೆ ಮನೆಗೆ ತಾಗಿಕೊಂಡೇ ಕೊಟ್ಟಿಗೆ ಇದ್ದು, ಮನೆ ವಸ್ತುಗಳನ್ನು ಅದರಲ್ಲಿಯೇ ಜೋಡಿಸಿಡಲಾಗಿತ್ತು. ಅಲ್ಲದೆ ಮನೆಯೊಳಗಡೆ ರಬ್ಬರ್ ಶೀಟ್‌ನ ದಾಸ್ತಾನು, ಮನೆಯವರ ದಾಖಲೆ ಪತ್ರಗಳು ಇದ್ದವು. ಅಡುಗೆ ಕೋಣೆಯಲ್ಲಿ ರಬ್ಬರ್ ಶೀಟನ್ನು ಕೂಡ ಒಣಗಲು ಹಾಕಿದ್ದರು.


ಎಂದಿನಂತೆ ಬೆಳಿಗ್ಗೆ 6 ಗಂಟೆಯ ನಂತರ ಅಡುಗೆ ಕೆಲಸ ಮಾಡುತ್ತಿದ್ದರು. ಮನೆಮಂದಿ ಹೊಸಮನೆಯಲ್ಲಿದ್ದರು. 7 ಗಂಟೆಯ ಹೊತ್ತಿಗೆ ಬೆಂಕಿ ಹಿಡಿದು ಮನೆಯ ಹೆಂಚು ಹಾಗೂ ಶೀಟ್ ಒಡೆಯುವ ಸದ್ದು ಕೇಳಿ ಹೊರಗೆ ಬಂದು ನೋಡಿದಾಗ ರಬ್ಬರ್ ಶೀಟ್‌ಗೆ ತಗುಲಿದ ಬೆಂಕಿ ಮನೆಯನ್ನು ಸಂಪೂರ್ಣವಾಗಿ ಆವರಿಸಿತ್ತು


ಕೂಡಲೇ ಅಕ್ಕಪಕ್ಕದವರು ಸೇರಿ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದ್ದು, ಅದಾಗಲೇ 3 ಕ್ವಿಂಟಾಲ್‌ಗೂ ಮಿಕ್ಕಿದ ರಬ್ಬರ್ ಶೀಟ್, ಅಗತ್ಯ ದಾಖಲೆ ಪತ್ರಗಳು ಹಾಗೂ ಬ್ಯಾಗಿನಲ್ಲಿದ್ದ ಸುಮಾರು 30ಸಾವಿರ ನಗದು ಸೇರಿದಂತೆ ಸುಮಾರು 1.50 ಲಕ್ಷ ರೂ ನಷ್ಟ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ.

 
ಸ್ಥಳಕ್ಕೆ ಗ್ರಾಮಕರಣಿಕ ರೂಪೇಶ್, ಗ್ರಾ.ಪಂ ಸದಸ್ಯರುಗಳಾದ ಯೋಗೀಶ್ ಆಲಂಬಿಲ, ಜಗದೀಶ್, ಪುರುಷೋತ್ತಮ, ಜಾನಕಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.