ಬೆಳ್ತಂಗಡಿ: ಕಪುಚಿನ್ ಕೃಷಿಕ್ ಸೇವಾ ಕೇಂದ್ರ ವಿಮುಕ್ತಿ ಸಂತ ಅಂತೋನಿ ಚರ್ಚ್ ಉಜಿರೆ, ಯಂಗ್ ಚಾಲೇಂಜರ್ಸ್ ಸ್ಪೋರ್ಟ್ಸ್ ಕ್ಲಬ್ ಮುಂಡಾಜೆ ಇವರ ಸಹಯೋಗದೊಂದಿಗೆ ಮಂಗಳೂರು ಫಾದರ್ ಮುಲ್ಲರ್ಸ್ ಆಸ್ಪತ್ರೆಯ ಸಹಕಾರದೊಂದಿಗೆ ಜ.17 ರಂದು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶತಕ ದಾನಿಗಳಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಲಿದೆ ಎಂದು ವಿಮುಕ್ತಿ ಸಂಸ್ಥೆಯ ನಿರ್ದೇಶಕ ಫಾ. ವಿನೋದ ಮಸ್ಕರೇನಸ್ ತಿಳಿಸಿದರು.
ಅವರು ಜ.13 ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು ಆರೋಗ್ಯವಂತರು ಸ್ವಯಂ ಪ್ರೇರಿತರಾಗಿ 3 ತಿಂಗಳಿಗೊಮ್ಮೆ ರಕ್ತದಾನ ಮಾಡುವುದರಿಂದ ಉತ್ತಮ ಆರೋಗ್ಯ ಮತ್ತು ಉಲ್ಲಾಸದಿಂದ ಇರಲು ಸಾಧ್ಯ. ಜೊತೆಗೆ ರಕ್ತದಾನ ಮಾಡುವ ಮೂಲಕ ಇತರರಿಗೆ ಪ್ರಯೋಜನವಾಗುತ್ತದೆ. ಅಂದು ಬೆಳಿಗ್ಗೆ 9.30ಕ್ಕೆ ಸಾಂಕೇತಿಕವಾಗಿ ಉದ್ಘಾಟನೆಗೊಂಡು ಮಧ್ಯಾಹ್ನ 1ರ ವರೆಗೆ ರಕ್ತದಾನ ಶಿಬಿರ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ವಿಮುಕ್ತಿ ಸಂಸ್ಥೆಯ ಸಹ ನಿರ್ದೇಶಕ ಫಾ. ರೋಹನ್ ಲೋಬೋ ಉಪಸ್ಥಿತರಿದ್ದರು.