ಬೆಳ್ತಂಗಡಿ: ದೇಶದ್ಯಾಂತ ಎಲ್ಲಾ ರಾಜ್ಯ ಮತ್ತು ತಾಲೂಕಿನಲ್ಲಿ ಜನವರಿ 16ರಂದು ಕೊರೊನಾ ಸೇನಾನಿಗಳಾಗಿ ಕಾರ್ಯನಿರ್ವಹಿಸಿದ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡುವ ಕಾರ್ಯಕ್ರಮ ಏಕ ಕಾಲದಲ್ಲಿ ನಡೆಯಲಿದೆ. ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ನಂತರ ದೇಶದದ್ಯಾಂತ ವಿವಿಧ ರಾಜ್ಯಗಳ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಕೊರೊನಾ ಸೇನಾನಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ಮುಂದುವರಿಯಲಿದೆ. ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 1೦೦ ಮಂದಿ ಆರೋಗ್ಯ ಸಿಬ್ಬಂದಿಗಳಿಗೆ ಮತ್ತು ಕೊರೊನಾ ಸೇನಾನಿಗಳಾಗಿ ದುಡಿದ ಕಾರ್ಯಕರ್ತರಿಗೆ ಪ್ರಥಮ ಹಂತದಲ್ಲಿ ಲಸಿಕೆ ನೀಡಲಾಗುವುದು ಎಂದು ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ| ವಿದ್ಯಾವತಿ ತಿಳಿಸಿದ್ದಾರೆ.