ಕುಪ್ಪೆಟ್ಟಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ) ಬೆಂಗಳೂರು ಇದರ ಬೆಳ್ತಂಗಡಿ ತಾಲೂಕು ಘಟಕದ ನೂತನ ಪ್ರತಿನಿಧಿಗಳಾಗಿ ಚುನಾಯಿತರಾದ ,ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಮಾಚಾರ್ ಮತ್ತು ಸಂಘಟನಾ ಕಾರ್ಯದರ್ಶಿ ದಿನೇಶ್ ನಾಯಕ್ ಹಾಗೂ ಈ ಹಿಂದಿನ ಸಂಘದಲ್ಲಿ ಜಿಲ್ಲಾ ಪ್ರತಿನಿಧಿಯಾಗಿದ್ದ ಬಿ.ಎಸ್.ಬಿರಾದಾರ್ ಇವರಿಗೆ ಕುಪ್ಪೆಟ್ಟಿ ಕ್ಲಸ್ಟರ್ ವತಿಯಿಂದ ಅಭಿನಂದಿಸಲಾಯಿತು.
ಬೆಳ್ತಂಗಡಿ ತಾಲೂಕು ಸಂಪನ್ಮೂಲ ಕೇಂದ್ರದ ಪ್ರೌಢಶಾಲಾ ವಿಭಾಗದ ಬಿ.ಅರ್.ಪಿ ಮೋಹನ್, ಕರಾಯ ಕ್ಲಸ್ಟರ್ ಸಿ.ಆರ್.ಪಿ.ಮಹಮ್ಮದ್ ಶರೀಫ್, ಬುಳೇರಿ ಶಾಲಾ ಮುಖ್ಯೋಪಾಧ್ಯಾಯರಾದ ವಿಶ್ವೇಶ್ವರ ಭಟ್, ಕುಪ್ಪೆಟ್ಟಿ ಶಾಲಾ ಮುಖ್ಯೋಪಾಧ್ಯಾಯರಾದ ಮಹಾಂತೇಶ್, ದೈಹಿಕ ಶಿಕ್ಷಣ ಶಿಕ್ಷಕರಾದ ಗಂಗಾಧರ, ಮೈರೋಳ್ತಡ್ಕ ಶಾಲಾ ಮುಖ್ಯ ಶಿಕ್ಷಕಿ ಚಂದ್ರಾವತಿ ಹಾಗೂ ಕುಪ್ಪೆಟ್ಟಿ ಕ್ಲಸ್ಟರ್ ಸಿ.ಆರ್.ಪಿ ಸಂಧ್ಯಾ ಬಿ. ಸನ್ಮಾನ ನೆರವೇರಿಸಿದರು. ಈ ಸಂದರ್ಭದಲ್ಲಿ ಕುಪ್ಪೆಟ್ಟಿ ಕ್ಲಸ್ಟರ್ ನ ಎಲ್ಲಾ ಪ್ರಾಥಮಿಕ ಶಾಲೆಗಳು ಮುಖ್ಯೋಪಾಧ್ಯಾಯರು ಹಾಗೂ ಪ್ರೌಢಶಾಲೆಗಳ ಶಿಕ್ಷಕರು ಉಪಸ್ಥಿತರಿದ್ದರು.