ಅನಾರು ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಪಟ್ರಮೆ: ಅನಾರು ಶ್ರೀ ದುರ್ಗಾಪರಮೆಶ್ವರೀ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಜ.14 ರಂದು ಪ್ರಾರಂಭಗೊಂಡಿತು. ಸಂಜೆ ಧ್ವಜಾರೋಹಣಗೊಂಡು, ಸುತ್ತು ಬಲಿ, ಮಹಾಪೂಜೆ ನಡೆಯಿತು. ರಾತ್ರಿ ಧಾರ್ಮಿಕ ಸಭೆ ಜರುಗಿತು.

ವಿಧಾನ ಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕ್ ಹೈಮಾಸ್ಟ್ ದೀಪದ ಉದ್ಘಾಟನೆಯನ್ನು ನೆರವೇರಿಸಿ ನಂತರ ಧಾರ್ಮಿಕ ಉಪನ್ಯಾಸ ನೀಡಿದರು. ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ನಿತೇಶ್ ಬಲ್ಲಾಳ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ವೇದಿಕೆಯಲ್ಲಿ ಪಂಚಾಯತ್‌ಗೆ ನೂತನವಾಗಿ ಆಯ್ಕೆಯಾದ ಸದಸ್ಯರಾದ ಮನೋಜ್, ಯತೀಶ್, ಗಿರಿಜಾ, ಜಿ.ಕೆ ಮೀನಾ, ರಾಜೇಶ್ ರೈ, ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಗೌಡ ಹೊಳೆಬದಿ, ಕಾರ್ಯದರ್ಶಿ ಮನೋಜ್ ಕುಮಾರ್ ಉಳಿಯಬೀಡು, ಸೇವಾ ಸಮಿತಿ ಕಾರ್ಯದರ್ಶಿ ಶರತ್ ಹಿರ್ತಡ್ಕ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಡೀಕಯ್ಯ ಗೌಡ ಕಾಯಿಲ, ಸುಬ್ಬಣ್ಣ ಗೌಡ ನೇಲ್ಯಡ್ಕ, ಪದ್ಮ ಗೌಡ ಕುಕ್ಕೇಲಿ, ಪೂರ್ಣೇಶ ಗಾಣದಕೊಟ್ಟಿಗೆ,ಪಂಚಾಯತ್‌ಗೆ ನೂತನವಾಗಿ ಆಯ್ಕೆಯಾದ ಸದಸ್ಯರುಗಳಿಗೆ ಹಾಗೂ 7ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಅನಾರು ಸ.ಹಿ.ಪ್ರಾ ಶಾಲಾ ವಿದ್ಯಾರ್ಥಿನಿ ಪೂಜಾ ದೇವಸ್ಯಕೋಡಿ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.


ನಂತರ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಊರ ಮತ್ತು ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ‘ವಿದ್ಯುನ್ಮತಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ ಜರುಗಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.