
ಉಜಿರೆ: ಧನು ಸಂಕ್ರಮಣದಿಂದ ಮೊದಲ್ಗೊಂಡು ಒಂದು ತಿಂಗಳ ಕಾಲ ಪ್ರತಿದಿನ ಬೆಳಿಗ್ಗೆ ಸೂರ್ಯೋದಯಕ್ಕೆ ಮೊದಲು ದೇವಾಲಯಗಳಲ್ಲಿ ನಡೆಯುತ್ತಿದ್ದ ಧನು ಪೂಜೆಯು ಜ .14 ಮಕರ ಸಂಕ್ರಮಣದ ದಿನ ಮುಂಜಾನೆ ಸಮಾಪ್ತಿಗೊಂಡಿತು . ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಗುರುವಾರ ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ ಜನಾರ್ದನ ಸ್ವಾಮಿ ಮತ್ತು ಪರಿವಾರ ದೇವರ ಸನ್ನಿಧಿಯಲ್ಲಿ ಹುಗ್ಗಿ ನೈವೇದ್ಯ ಸಮರ್ಪಣೆಯೊಂದಿಗೆ ಧನು ಪೂಜೆ ನಡೆಯಿತು. ಶರತ್ ಕೃಷ್ಣ ಪಡುವೆಟ್ನಾಯರ ನೇತೃತ್ವದಲ್ಲಿ ಅರ್ಚಕ ವೇದಮೂರ್ತಿ ಶ್ರೀನಿವಾಸ ಹೊಳ್ಳರು ಪೂಜಾ ಕಾರ್ಯ ನೆರವೇರಿಸಿದರು . ಊರ ಪರಊರ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಬೆಳಿಗ್ಗೆ 5.15 ಕ್ಕೆ ಧನು ಪೂಜೆ ನಡೆಯುವುದರೊಂದಿಗೆ ಒಂದು ತಿಂಗಳಿನಿಂದ ನಡೆಯುತ್ತಿದ್ದ ಧನು ಪೂಜೆ ಸಮಾಪನಗೊಂಡಿತು. ಧರ್ಮಾಧಿಕಾರಿ ಡಾ! ಡಿ ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು . ಬೆಳ್ತಂಗಡಿ ತಾಲೂಕಿನ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನ , ಬಳ್ಳಮಂಜ ಶ್ರೀ ಮದನಂತೇಶ್ವರ ದೇವಸ್ಥಾನ ,ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ,ಪಜಿರಡ್ಕ ಶ್ರೀ ಸದಾಶಿವ ದೇವಸ್ಥಾನ ,, ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ,ನಾಳ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ ,ಬಳಂಜ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ,ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ,ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ , ಅಳದಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ,ಸೂಳೆಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನ , ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಮೊದಲಾದ ದೇವಸ್ಥಾನಗಳಲ್ಲಿ ಧನುರ್ಮಾಸದಲ್ಲಿ ಪ್ರತಿನಿತ್ಯ ನಡೆದ ಧನು ಪೂಜೆಯು ಮಕರ ಸಂಕ್ರಮಣದಂದು ಸಮಾಪನಗೊಂಡಿತು.