ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

  

ಕುವೆಟ್ಟು: ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥಸ್ವಾಮೀಜಿಯವರ ಪ್ರಥಮ ಆರಾಧನಾಂಗವಾಗಿ ಐ ಮಿತ್ರ ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ವಿಭಾಗ ಇವರ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರವು ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಜ.14ರಂದು ಜರಗಿತು.


ಉಜಿರೆ ಕಿರಿಯಾಡಿ ಶ್ರೀ ಸದಾಶಿವ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಕೆ. ಉದಯ ಸಂಪಿಗೆತ್ತಾಯ ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿದರು.


ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ರಘರಾಮ್ ಭಟ್ ಮಠ. ಪಡಂಗಡಿ ಗ್ರಾ.ಪಂ.ಸದಸ್ಯ ಸಂತೋಷ್ ಕುಮಾರ್ ಜೈನ್, ರಾಮಚಂದ್ರ ಪೂಜಾರಿ ನ್ಯಾಯದಕಲ, ಐ ಮಿತ್ರ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ರಾಘವೇಂದ್ರ ಭಟ್ ಮಠ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.