ಬೆಳ್ತಂಗಡಿ: ದೇಶದಾದ್ಯಂತ ಎಲ್ಲಾ ರಾಜ್ಯ ಮತ್ತು ತಾಲೂಕಿನಲ್ಲಿ ಕೊರೊನಾ ಸೇನಾನಿಗಳಾಗಿ ಕಾರ್ಯನಿರ್ವಹಿಸಿದ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡುವ ಕಾರ್ಯಕ್ರಮ ಇಂದು(ಜ.16)ಏಕಕಾಲದಲ್ಲಿ ನಡೆದಿದ್ದು, ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 100 ಮಂದಿ ಆರೋಗ್ಯ ಸಿಬ್ಬಂದಿಗಳಿಗೆ ಮತ್ತು ಕೊರೊನಾ ಸೇನಾನಿಗಳಾಗಿ ದುಡಿದ ಕಾರ್ಯಕರ್ತರಿಗೆ ಪ್ರಥಮ ಹಂತದಲ್ಲಿ ಲಸಿಕೆ ನೀಡುವ ಕಾರ್ಯಕ್ರಮ ಜರುಗಿತು.
ಶಾಸಕ ಹರೀಶ್ ಪೂಂಜ ದೀಪ ಪ್ರಜ್ವಲಿಸಿ ಲಸಿಕೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಧಾನ ಪರಿಸತ್ ಶಾಸಕ ಕೆ ಪ್ರತಾಪ ಸಿಂಹ ನಾಯಕ್, ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ| ವಿದ್ಯಾವತಿ, ತಾಲೂಕು ನೋಡೆಲ್ ಅಧಿಕಾರಿ ರತ್ನಾಕರ, ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು, ನ.ಪಂ ಮುಖ್ಯಾಧಿಕಾರಿ ಸುಧಾಕರ್, ನ.ಪಂ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ತಾ.ಪಂ ಉಪಾಧ್ಯಕ್ಷೆ ವೇದಾವತಿ, ನ.ಪಂ ಸದಸ್ಯರು, ತಾ.ಪಂ ಸದಸ್ಯರು, ಜಿ.ಪಂ ಸದಸ್ಯರು, ಆಸ್ಪತ್ರೆಯ ಸಿಬ್ಬಂದಿಗಳು, ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಕೊರೊನಾ ಸೇನಾನಿಗಳು, ಆರೋಗ್ಯ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಪ್ರಥಮ ಲಸಿಕೆಯನ್ನು ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿ ಕಿರಣ್ ರವರಿಗೆ ನೀಡಲಾಯಿತು.