ಬೆಳ್ತಂಗಡಿ : ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಜಿ.ಪಂ. ಸದಸ್ಯ ಶಾಹುಲ್ ಹಮೀದ್ಕೆ.ಕೆ. ರವರು ನೇಮಕಗೊಂಡಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ನದೀಮ್ ಜಾವೀದ್ ರವರ ಆದೇಶದ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಶಹೀದ್ಅಹ್ಮದ್ ರವರು ಕಣಿಯೂರು ಕ್ಷೇತ್ರದ ಜಿ.ಪಂ.ಸದಸ್ಯ ಶಾಹುಲ್ ಹಮೀದ್ಕೆ.ಕೆ. ರವರನ್ನು ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಇವರು ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್, ಮಾಜಿ ಸಚಿವ ರಮಾನಾಥ ರೈ, ಶಾಸಕ ಯು.ಟಿ ಖಾದರ್, ಜಿಲ್ಲೆಯ ಮಾಜಿ ಶಾಸಕರು ಹಾಗೂ ಹಿರಿಯ ಕಾಂಗ್ರೆಸ್ ನಾಯಕರ ಶಿಫಾರಸ್ಸಿನ ಮೇರೆಗೆ ಆಯ್ಕೆಯಾಗಿದ್ದಾರೆ.