ರಾಜ್ಯ ಸಣ್ಣ ನೀರಾವರಿ ಮತ್ತು ಕಾನೂನು ಹಾಗೂ ಸಂಸದೀಯ ವ್ಯವಹಾರ ಮಂಡಳಿ ಸಚಿವ ಜೆ.ಸಿ ಮಾಧುಸ್ವಾಮಿ ಯವರಿಗೆ ಅಭಿನಂದನಾ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

  

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಸಣ್ಣ ನೀರಾವರಿ ಮತ್ತು ಅಭಿವೃದ್ಧಿ ಇಲಾಖೆಯಲ್ಲಿ ವಿವಿಧ ಕಾಮಗಾರಿಗಳನ್ನು ಮಂಜೂರುಗೊಳಿಸಿ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸುತ್ತಿರುವ ರಾಜ್ಯ ಸಣ್ಣ ನೀರಾವರಿ ಮತ್ತು ಕಾನೂನು ಹಾಗೂ ಸಂಸದೀಯ ವ್ಯವಹಾರ ಮಂಡಳಿ ಸಚಿವ ಜೆ.ಸಿ ಮಾಧುಸ್ವಾಮಿ ಯವರಿಗೆ ಅಭಿನಂದನಾ ಕಾರ್ಯಕ್ರಮವು ಜ.16 ರಂದು ಬೆಳ್ತಂಗಡಿಯ ಶ್ರೀ ಮಂಜುನಾಥೇಶ್ವರ ಕಲಾಭವನದಲ್ಲಿ ಜರುಗಿತು.

ರಾಜ್ಯ ಸಣ್ಣ ನೀರಾವರಿ ಮತ್ತು ಕಾನೂನು ಹಾಗೂ ಸಂಸದೀಯ ವ್ಯವಹಾರ ಮಂಡಳಿ ಸಚಿವ ಜೆ.ಸಿ ಮಾಧುಸ್ವಾಮಿ ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕ್, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಧನಲಕ್ಷ್ಮೀ ಜನಾರ್ದನ್, ಜಿಲ್ಲಾ ಎಸ್.ಟಿ ಮೋರ್ಚಾದ ಅಧ್ಯಕ್ಷ ಚೆನ್ನ ಕೇಶವ, ಬಿಜೆಪಿ ಮಂಡಲ ಉಪಾಧ್ಯಕ್ಷ ಸೀತಾರಾಮ ಬಿ.ಎಸ್ ಬೆಳಾಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಮಾಜಿ ಅಧ್ಯಕ್ಷೆ ಶಾರದಾ ರೈ, ಜಿ.ಪಂ ಸದಸ್ಯರಾದ ಮಮತಾ ಎಂ ಶೆಟ್ಟಿ, ಸೌಮ್ಯಲತಾ ಜಯಂತ್ ಗೌಡ, ಕೊರಗಪ್ಪ ನಾಯ್ಕ, ನ.ಪಂ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ತಾ.ಪಂ .ಸದಸ್ಯರು, ಚುನಾಯಿತ ಗ್ರಾಪಂ ಸದಸ್ಯರುಗಳು, ತಾಲೂಕು ಯುವ ಮೋರ್ಚಾ ಅಧ್ಯಕ್ಷ ಯಶವಂತ ಗೌಡ ಬೆಳಾಲು ಗಾಗೂ ಪದಾಧಿಕಾರಿಗಳು, ಭಾರತೀಯ ಜನತಾ ಪಕ್ಷದ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.