ಬೆಳ್ತಂಗಡಿ: ಸಮೂಹ ಸಂಪನ್ಮೂಲ ಕೇಂದ್ರ ಬಂಗಾಡಿ ಇದರ ವತಿಯಿಂದ ಬೆಳ್ತಂಗಡಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕಿಶೋರ್ ಕುಮಾರ್ ದೇವನಾರಿ ಶಾಲೆ ಹಾಗೂ ದ. ಕ ಜಿಲ್ಲಾ ಸಂಘದ ಸಹಕಾರ್ಯದರ್ಶಿಗಳಾಗಿ ಆಯ್ಕೆಯಾದ ಅಮಿತಾನಂದ ಹೆಗ್ಡೆ ಬಂಗಾಡಿ ಶಾಲೆ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಿ. ಆರ್. ಪಿ. ರಮೇಶ್ ಪೈಲಾರ್, ಇ.ಸಿ.ಓ. ಪುಷ್ಪ, ಶಾಲೆಗಳ ಮುಖ್ಯ ಶಿಕ್ಷಕರು ಹಾಜರಿದ್ದರು.