2020ರ ಗ್ರಾ.ಪಂ ಚುನಾವಣೆಯಲ್ಲಿ ತಾಲೂಕಿನಲ್ಲಿ ನಡೆದ ಮತಪತ್ರ ಬದಲಾವಣೆ ಹಗರಣ ಖಂಡಿಸಿ ಕಾಂಗ್ರೆಸ್ ಪಕ್ಷ ಹಾಗೂ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

   

ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಘಟಕ ಹಾಗೂ ಜಾತ್ಯಾತೀತ ಪ್ರಗತಿಪರ ಸಂಘಟನೆಗಳು, ದಲಿತ ಸಂಘಟನೆಗಳು, ಕಮ್ಯುನಿಸ್ಟ್ ನೇತೃತ್ವದ ಕಾರ್ಮಿಕ ಸಂಘಟನೆಗಳು, ಕರ್ನಾಟಕ ರಾಜ್ಯ ಋಣಮುಕ್ತ ಹೋರಾಟ ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 2020ರ ಗ್ರಾ.ಪಂ ಚುನಾವಣೆಯಲ್ಲಿ ನಡೆದ ಮತಪತ್ರ ಬದಲಾವಣೆ ಹಗರಣ ಖಂಡಿಸಿ, ಇದರ ಸಮಗ್ರ ತನಿಖೆ ನಡೆಸಲು ಆಗ್ರಹಿಸಿ ಹಾಗೂ ಚುನಾವಣೆಯಲ್ಲಿ ಸೀರೆ, ಹಣ, ಹೆಂಡ ಹಂಚಿದ ಅನೀತಿಗಳ ವಿರುದ್ಧ ನಾಗರಿಕರ ಬೃಹತ್ ಪ್ರತಿಭಟನಾ ರ್‍ಯಾಲಿ ಜ.19 ರಂದು ಬೆಳ್ತಂಗಡಿ ಅಯ್ಯಪ್ಪ ಮಂದಿರದಿಂದ ಬೆಳ್ತಂಗಡಿ ಮಿನಿ ವಿಧಾನ ಸೌಧದವರೆಗೆ ನಡೆಯಿತು.

ಮಾಜಿ ಶಾಸಕ ಕೆ ವಸಂತ ಬಂಗೇರ, ವಿಧಾನ ಪರಿಷತ್ ಶಾಸಕ ಕೆ ಹರೀಶ್ ಕುಮಾರ್, ಮಾಜಿ ಸಚಿವ ಗಂಗಾಧರ ಗೌಡ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ರಂಜನ್ ಜಿ ಗೌಡ,ಬ್ಲಾಕ್ ಕಾಂಗ್ರೆಸ್  ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಶರತ್, ಕಮ್ಯುನಿಸ್ಟ್ ನೇತೃತ್ವದ ಕಾರ್ಮಿಕ ಸಂಘಟನೆಗಳ ಅಧ್ಯಕ್ಷ ಹಾಗೂ ನ್ಯಾಯವಾದಿ ಬಿ.ಎಂ ಭಟ್, ನ.ಪಂ ಸದಸ್ಯರಾದ ಜಗದೀಶ್ ಡಿ, ಆಯೂಬ್, ಅಶ್ರಫ್ ನೆರಿಯ, ಹಾಜಿರಾ, ಅಬ್ದುಲ್ ರಹಿಮಾನ್ ಪಡ್ಪು, ಮತ್ತಿತರ ಪ್ರಮುಖರು, ವಿವಿಧ ಸಂಘಟನೆಗಳ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.